ನವದೆಹಲಿ,ಮಾ,8,2020(www.justkannada.in): ಐಸಿಸಿ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹರ್ಮನ್ ಪ್ರಿತ್ ಕೌರ್ ನೇತೃತ್ವದ ಟೀಂ ಇಂಡಿಯಾ ಆಸ್ಪ್ರೇಲಿಯಾ ವಿರುದ್ದ ಸೋಲನುಭವಿಸಿದೆ.
ಮೆಲ್ಬೋರ್ನ್ ನಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ದ ಗೆಲುವು ಸಾಧಿಸುವ ಮೂಲಕ ಆಸ್ಪ್ರೇಲಿಯಾ ತಂಡ 5 ಬಾರಿ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಇಂದು ವಿಶ್ವ ಮಹಿಳಾ ದಿನಾಚರಣೆ ಈ ದಿನದಂದೇ ಮಹಿಳಾ ಟಿ20 ವಿಶ್ವಕಪ್ ಫೈನಲ್ ನಲ್ಲಿ ಭಾರತದ ಕ್ರಿಕೆಟ್ ವನಿತೆಯರಲು ಸೋಲನುಭವಿಸಿದ್ದಾರೆ.
ಟಾಸ್ ಗೆದ್ದು ಬ್ಯಾಟಿಂಗ್ ಆಡಿದ ಆಸ್ಟ್ರೇಲಿಯಾ ತಂಡ 20 ಓವರ್ ಗೆ 184 ರನ್ ಕಲೆಹಾಕಿತು. ಆಸ್ಪ್ರೇಲಿಯಾ ನೀಡಿದ್ದ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಆಸೀಸ್ ಬೌಲರ್ ಗಳ ದಾಳಿಗೆ ತತ್ತರಿಸಿ 99 ರನ್ ಗೆ ಆಲ್ ಔಟ್ ಆಯಿತು. ಈ ಮೂಲಕ ಆಸ್ಟ್ರೇಲಿಯಾ 85 ರನ್ ಗಳ ಭರ್ಜರಿ ಗೆಲುವು ದಾಖಲಿಸಿ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.
Key words: ICC -Women’s- T20 World Cup- India-lose-astralia- won