ಮೈಸೂರು,ಮಾ,19,2020(www.justkannada.in): ಮೈಸೂರಿನ ರಾಮಕೃಷ್ಣ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಸದ್ಯ ರೋಗಿಗಳು ಅಪಾಯದಿಂದ ಪಾರಾಗರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮೈಸೂರಿನ ವಿದ್ಯಾರಣ್ಯಪುರಂನಲ್ಲಿರುವ ರಾಮಕೃಷ್ಣ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಮಧ್ಯರಾತ್ರಿ 12 ಗಂಟೆಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯ ನೆಲ ಮಹಡಿಯಲ್ಲಿ ಅಗ್ನಿಅವಘಡ ಸಂಭವಿಸಿದ್ದು ಬೆಂಕಿ ಕಾಣಿಸಿಕೊಂಡ ಹಿನ್ನೆಲೆ. ಸ್ಥಳೀಯರ ನೆರವಿನಿಂದ ಆಸ್ಪತ್ರೆ ಸಿಬ್ಬಂದಿಗಳು ರೋಗಿಗಳನ್ನ ಹೊರಗೆ ತಂದರು.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
Key words: Fire – Short circuit- Mysore hospital