ಬೆಂಗಳೂರು,ಮಾ,20,2020(www.justkannada.in): ಮಹಾಮಾರಿ ಕೊರೊನಾ ಸೋಂಕಿನ ಪ್ರಕರಣ ದಿನೇ ದಿನೇ ಹೆಚ್ಚುತ್ತಿದ್ದು ಈ ಹಿನ್ನೆಲೆ ದೇಶದ ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಭಾರಿ ಆತಂಕ ಮೂಡಿಸಿರುವ ಕೊರೋನಾ ವೈರಸ್ ತಡೆಗಟ್ಟಲು ರಾಜ್ಯ ಕೇಂದ್ರ ಸರ್ಕಾರಗಳು ಮುಂಜಾಗ್ರತೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು ಈ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ, ಎಲ್ಲ ರಾಜ್ಯಗಳ ಸಿಎಂ ಜೊತೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಮೊದಲು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಜತೆ, ನಂತರ ಕೇರಳಾ ಸಿಎಂ ಪಿಣರಾಯಿ ವಿಜಯನ್ ಜತೆ ನಂತರ ಕರ್ನಾಟಕ ಸಿಎಂ ಬಿಎಸ್ ವೈ ಜತೆ ಪ್ರಧಾನಿ ಸಂವಾದ ನಡೆಸಿದರು ಎನ್ನಲಾಗಿದೆ.
ವಿಧಾನಸೌಧದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಅಶ್ವತ್ಥ್ ನಾರಾಯಣ್, ಸಿಎಸ್ ವಿಜಯಭಾಸ್ಕರ್ ಸೇರಿ ಹಲವರು ಪಾಲ್ಗೊಂಡರು. ಈ ವೇಳೆ ರಾಜ್ಯದಲ್ಲಿ ಕೊರೋನಾ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಬಗ್ಗೆ, ರಾಜ್ಯದ ವಾಸ್ತವ ಸ್ಥಿತಿಯುನ್ನು ಸಿಎಂ ಯಡಿಯೂರಪ್ಪ, ಪ್ರಧಾನಿ ಮೋದಿ ಅವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.
Key words: coronavirus –horror-PM Modi -Video Conference – All States- CM