ನವದೆಹಲಿ,ಮೇ 28,2019(www.justkannada.in): ರಾಜ್ಯದಲ್ಲಿ ಬರ ಆವರಿಸಿ ಕುಡಿಯುವ ನೀರಿಗಾಗಿ ಹಾಹಾಕಾರ ಪಡುತ್ತಿರುವ ಸಂದರ್ಭದಲ್ಲೇ ಕಾವೇರಿ ನದಿನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಶಾಕ್ ನೀಡಿದೆ. ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನದಿನೀರು ನಿರ್ವಹಣಾ ಪ್ರಾಧಿಕಾರ ಇಂದು ಆದೇಶ ನೀಡಿದೆ.
ತಮಿಳುನಾಡು ಜೂನ್ ತಿಂಗಳ ತನ್ನ ಪಾಲಿನ 9.25 ಟಿಎಂಸಿ ನೀರುಬಿಡುಗಡೆ ಮಾಡುವಂತೆ ಪ್ರಾಧಿಕಾರದ ಮೇಲೆ ಒತ್ತಡ ಹೇರಿತ್ತು. ಈ ಹಿನ್ನೆಲೆ ಇಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುವಂತೆ ಸೂಚಿಸಿದೆ.
ರಾಜ್ಯದಲ್ಲಿ ಬರಗಾಲ ಸಂದರ್ಭದಲ್ಲಿ ಈಗ ಪ್ರಾಧಿಕಾರ ನೀಡಿರುವ ಆದೇಶ ಜನತೆ ಆತಂಕ ಮೂಡಿಸಿದೆ. ಕೆಆರ್ಎಸ್ನಲ್ಲಿ ಸದ್ಯ ಕುಡಿಯುವ ನೀರಿಗೆ ಸಾಕಾಗುವಷ್ಟು ಮಾತ್ರ ನೀರು ಸಂಗ್ರಹವಾಗಿದೆ. ಈ ಮಧ್ಯೆ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
Key words: Cauvery Water Management Authority: Order to Give Water to Tamil Nadu
#CauveryWater #ManagementAuthority #Water #TamilNadu