ನವದೆಹಲಿ, ಏಪ್ರಿಲ್ 20, 2020 (www.justkannada.in): ಲಾಕ್ಡೌನ್ ಎರಡನೇ ಅವಧಿಯಲ್ಲಿ ಏಪ್ರಿಲ್ 20ರ ನಂತರ ಇ ಕಾಮರ್ಸ್ ಸಂಸ್ಥೆಗಳಿಗೆ ವಿನಾಯತಿ ನೀಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯವು ಮಾರ್ಗಸೂಚಿಯಲ್ಲಿ ಹೇಳಿದೆ.
ಅಮೆಜಾನ್, ಫ್ಲಿಪ್ ಕಾರ್ಟ್ ನಂಥ ಆನ್ ಲೈನ್ ಸೇವಾ ಸಂಸ್ಥೆಗಳು ಪೂರ್ಣಪ್ರಮಾಣದಲ್ಲಿ ಕಾರ್ಯ ನಿರ್ವಹಿಸಬಹುದಾಗಿದೆ ಎಂದು ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ಹೇಳಿದ್ದಾರೆ. ಆದರೆ, ಮೇ 3ರ ತನಕ ಅಗತ್ಯ ವಸ್ತುಗಳನ್ನು ಮಾತ್ರ ಮಾರಾಟ ಮಾಡಬಹುದಾಗಿದೆ.
ಏಪ್ರಿಲ್ 20ರ ನಂತರ ಇ ಕಾಮರ್ಸ್ ವೆಬ್ ತಾಣಗಳ ಸೇವೆ ರೆಡ್ ಅಲರ್ಟ್ ಇರುವ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಆನ್ ಲೈನ್ ಶಾಪಿಂಗ್ ತಾಣಗಳದ ಅಮೆಜಾನ್, ಫ್ಲಿಪ್ ಕಾರ್ಟ್ ಮುಂತಾದ ತಾಣಗಳ ಸೇವೆ ಲಭ್ಯವಿರುವುದಿಲ್ಲ.