ಬೆಳಗಾವಿ, ಏ.27, 2020 : (www.justkannada.in news) ಜಿಲ್ಲೆಯ ಚಿಕ್ಕೋಡಿ ನಗರದಲ್ಲಿ ತನ್ನ ಮನೆಯ ಮುಂದೆ ವಾಹನ ತೊಳೆಯುತ್ತಿದ್ದ ಅರೆ ಸೈನಿಕ ಪಡೆಯ ಯೋಧನನ್ನು ಕೇವಲ ಮಾಸ್ಕ್ ಧರಿಸಿಲ್ಲ ಎನ್ನುವ ಕಾರಣಕ್ಕೆ ಬಂಧಿಸಿರುವ ಪೊಲೀಸರ ಕ್ರಮವನ್ನು ಸಚಿವ ರಮೇಶ್ ಜಾರಕಿಹೊಳಿ ಖಂಡಿಸಿದ್ದಾರೆ.
ಈ ಸಂಬಂಧ ಜಲಸಂಪನ್ಮೂಲ ಸಚಿವರ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿರುವುದು ಹೀಗಿದೆ…
ಒಬ್ಬ ಯೋಧ ಎನ್ನುವುದನ್ನೂ ಗಮನಿಸದೇ ಸಾರ್ವಜನಿಕವಾಗಿ ಹಿಂಸಿಸಿ ; ಒಬ್ಬ ಖೈದಿಯಂತೆ ಕೈಗೆ ಕೋಳ ತೊಡಿಸಿ ಬಂಧಿಸಿರುವುದನ್ನು ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಲು ಸಾಧ್ಯವಿಲ್ಲ. ಒಬ್ಬ ನಿರಪರಾಧಿ ಯೋಧನನ್ನು ಅತ್ಯಂತ ಅಮಾನುಷವಾಗಿ ಹಿಂಸಿಸಿ, ಬಂಧಿಸಿರುವುದು ಸಮವಸ್ತ್ರ ಧರಿಸಿದ ಸೈನಿಕರಿಗೆ ಮಾಡಿದ ಅವಮಾನ.
ಕೂಡಲೇ ಬಂಧಿತ ಅರೆ ಸೈನಿಕ ಪಡೆಯ ಯೋಧನನ್ನು ಗೌರವದಿಂದ ಬಿಡುಗಡೆ ಮಾಡಬೇಕು ಮತ್ತು ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯ ಮೇಲೆ ತನಿಖೆ ನಡೆಸಿ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.
key words : belagavi-crpf-police-arrested-demand-to-relese-ramesh-jarakiholi