ಬೆಂಗಳೂರು, ಮೇ 18, 2020 (www.justkannada.in): ಸಾರಿಗೆ ಸೇವೆ, ಅಂಗಡಿ-ಮುಂಗಟ್ಟು ಹಾಗೂ ಜನಸಂಚಾರಕ್ಕೆ ಅವಕಾಶ ಕೊಟ್ಟಿರುವ ಸರ್ಕಾರ ಭಾನುವಾರ ಸಂಪೂರ್ಣ ಲಾಕ್‍ಡೌನ್ ಮಾಡಿದೆ.
ಬೆಳಗ್ಗೆ 7 ರಿಂದ 9 ಗಂಟೆ ಹಾಗೂ ಸಂಜೆ 5 ರಿಂದ 7 ಗಂಟೆವರೆಗೆ ಉದ್ಯಾನವನಗಳನ್ನು ತೆರೆಯಬಹುದು. ಅದೇ ರೀತಿ ಸಲೂನ್‍ಗಳನ್ನೂ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಸಿನಿಮಾ, ಮಾಲ್, ಜಿಮ್ ಹೊರತುಪಡಿಸಿ ಉಳಿದ ಎಲ್ಲ ರೀತಿಯ ಮಳಿಗೆ ತೆರೆಯಲು ಹಾಗೂ ಬೀದಿಬದಿ ವ್ಯಾಪಾರಕ್ಕೂ ಅವಕಾಶ ಕಲ್ಪಿಸಿಕೊಡಲಾಗಿದೆ.
ಕಂಟೈನ್ಮೆಂಟ್ ಝೋನ್‍ಗಳಲ್ಲಿ ನಿಯಮ ಪಾಲನೆ ಕಡ್ಡಾಯಗೊಳಿಸಲಾಗಿದ್ದು, ಕಾನೂನು ಮೀರಿದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.
ಕಂಟೈನ್ಮೆಂಟ್ ಝೋನ್‍ಗಳಿಗೆ ಈ ಮಾರ್ಗಸೂಚಿ ಅನ್ವಯವಾಗುವುದಿಲ್ಲ. ಆದರೆ, ಅಲ್ಲಿನ ಪರಿಸ್ಥಿತಿ ನೋಡಿಕೊಂಡು ಹಂತ ಹಂತವಾಗಿ ಲಾಕ್‍ಡೌನ್ ಸಡಿಲಿಕೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಭಾನುವಾರ ಹೊರತುಪಡಿಸಿ ಉಳಿದ ಆರು ದಿನ ಲಾಕ್‍ಡೌನ್ ತೆರವುಗೊಳಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.