ಬೆಂಗಳೂರು,ಜೂ,1,2020(www.justkannada.in): ದೇಶ ಕಟ್ಟುವ ಕಾಯಕಕ್ಕೆ ಪ್ರಧಾನಿ ಮೋದಿ ತನ್ನನ್ನ ಅರ್ಪಿಸಿಕೊಂಡಿದ್ದಾರೆ. ಆಡಳಿತದಲ್ಲಿ ಸುಧಾರಣೆ ತಂದು ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಗುಣಗಾನ ಮಾಡಿದರು.
ಕೇಂದ್ರದಲ್ಲಿ ಬಿಜೆಪಿ ಒಂದು ವರ್ಷ ಪೂರೈಸಿದ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ಸಾಧನೆ ಬಗ್ಗೆ ಹೊಗಳಿದ ಸಿಎಂ ಬಿಎಸ್ ಯಡಿಯೂರಪ್ಪ, ಪ್ರಧಾನಿ ಮೋದಿ ಹಲವು ದಶಕಗಳಿಂದ ತುಕ್ಕು ಹಿಡಿದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಆಡಳಿತದಲ್ಲಿ ಸುಧಾರಣೆ ತಂದು ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಿದ್ದಾರೆ. ದೇಶದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಗುವ ಸಾಧ್ಯವಿದೆ. ಮೋದಿಯವರು ಪ್ರಧಾನಿಯಾದ ಮೊದಲ ದಿನ ಸಂಸತ್ ಭವನಕ್ಕೆ ನಮಸ್ಕಾರ ಮಾಡಿದ್ದರು. ಈ ನಡುವೆ ಅವರು ಐದು ವರ್ಷದ ಅಧಿಕಾರದಲ್ಲಿ ನುಡಿದಂತೆ ನಡೆದಿದ್ದಾರೆ. ಜನ್ ದನ್ ಯೋಜನೆ, ಆಯುಷ್ಮಾನ್ ಭಾರತ್, ಮುದ್ರಾ ಯೋಜನೆ, ಸ್ಟಾರ್ಟ್ ಅಪ್ ಇಂಡಿಯಾ ಯೋಜನೆ ಸೇರಿ ಹಲು ಯೋಜನೆ ಜಾರಿಗೆ ತಂದಿದ್ದಾರೆ. ದೇಶದ ಸುರುಕ್ಷತೆಗೆ ಮೋದಿ ಆದ್ಯತೆ ನೀಡಿದ್ದಾರೆ ಎಂದು ನುಡಿದರು.
ದೇಶದ ಏಕತೆಗಾಗಿ ಜಮ್ಮುಕಾಶ್ಮೀರದ 370 ವಿಧಿ ರದ್ದು ಮಾಡಿದರು. ಈ ಮೂಲಕ ಜಮ್ಮು ಕಾಶ್ಮೀರ ಅಭಿವೃದ್ಧಿಗೆ ನಾಂದಿ ಹಾಡಿದ್ದಾರೆ. ಬೇರೆ ದೇಶದಲ್ಲಿ ನಿರಾಶ್ರಿತರಾಗಿರುವ ಭಾರತೀಯರಿಗೆ ಪುನರ್ವಸತಿ ಕಲ್ಪಿಸಿದ್ದಾರೆ. ರೈತರು, ಸಾಮಾನ್ಯ ಜನರು, ಕೈಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ರೈತರಿಗೆ 6 ಸಾವಿರ ಸಹಾಯಧನ, ಬೀದಿ ಕಾರ್ಮಿಕರಿಗೆ, ವ್ಯಾಪಾರಿಗಳಿಗೆ ಪಿಂಚಿಣಿ ಯೋಜನೆ ಜಾರಿಗೆ ತಂದಿದ್ದಾರೆ. ಹೊಸ ಮೋಟಾರು ವಾಹನ ಕಾಯ್ದೆ. ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಕಾಯ್ದೆ ಜಾರಿ ಮಾಡಿದ್ದಾರೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು.
ಕೇಂದ್ರದಲ್ಲಿ ಕೊರೋನಾ ವಿರುದ್ದ ಪ್ರಧಾನಿ ಮೋದಿ ಹೋರಾಡುತ್ತಿದ್ದಾರೆ. ಪ್ರಧಾನಿ ಮೋದಿಯನ್ನ ವಿಶ್ವ ಆರೋಗ್ಯ ಸಂಸ್ಥೆಯೇ ಕೊಂಡಾಡಿದೆ. ಕೊರೋನಾ ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ ಎದುರಿಸಿದ್ದೇವೆ. ಹೀಗಾಗಿ ಆರ್ಥಿಕ ಪುನಶ್ಚೇತನಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ ಎಂದು ಸಿಎಂ ಬಿಎಸ್ ವೈ ಹೇಳಿದರು.
Key words: Prime Minister-narendra Modi-CM BS yeddyurappa- praised -central government.