ಮೈಸೂರು,ಜೂ,1,2020(www.justkannada.in): ಕೊರೊನಾದಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರೈತರ ಸಮಸ್ಯೆ ವಿಚಾರವಾಗಿ ಜೂನ್ 5 ರಂದು ಪ್ರತಿಭಟನೆ ನಡೆಸುತ್ತೇವೆ ಎಂದು ರಾಜ್ಯ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.
ಗನ್ ಹೌಸ್ ಬಳಿಕ ಕುವೆಂಪು ಪಾರ್ಕ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುರುಬೂರು ಶಾಂತಕುಮಾರ್, . ರೈತರ ಹಿತ ಕಾಯಬೇಕಾದ ಸರ್ಕಾರ ರೈತರಿಗೆ ವಂಚನೆ ಮಾಡುತ್ತಿದೆ. ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮರುಪಾವತಿ ಮಾಡಿದವರಿಗೆ ಮಾತ್ರ ಹೊಸ ಎನ್ನುತ್ತಿದ್ದಾರೆ. ಆದರೆ ಈ ಸಂದರ್ಭದಲ್ಲಿ ರೈತರು ಸಾಲಮರುಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ಇದು ರೈತರಿಗೆ ನುಂಗಲಾರದ ತುತ್ತಾಗಿದೆ. ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ರಸ್ತೆ ಸುರಿಯುವ ಸ್ಥಿತಿ ಎದುರಾಗಿದೆ. ಇಂತಹ ಸಂಧರ್ಭದಲ್ಲಿ ಸರ್ಕಾರ ರೈತರ ಹಿತಕಾಯುತ್ತಿಲ್ಲ. ರೈತ ವಿರೋಧಿ ಕಾಯ್ದೆ, ಯೋಜನೆಗಳನ್ನು ತಂದು ಅನ್ಯಾಯ ಮಾಡುತ್ತಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಕೃಷಿಗಾಗಿ ರೈತರು ಫೈನಾನ್ಸ್ ಸಂಸ್ಥೆಗಳಲ್ಲಿ ಕೈಸಾಲ ಮಾಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಸಾಲಮರುಪಾವತಿಸಲಾಗದೆ ಕಂಗೆಟ್ಟಿದ್ದಾರೆ. ಆದರೆ ಫೈನಾನ್ಸ್ ಸಂಸ್ಥೆಗಳು ರೈತರ ಮೇಲೆ ದಬ್ಬಾಳಿಕೆ ಮಾಡುತ್ತಿವೆ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸರ್ಕಾರ ಗಮನಹರಿಸಬೇಕು. ರೈತರಿಗೆ ಹೊಸ ಸಾಲ ನೀಡಿ ಕೃಷಿಗೆ ಮತ್ತಷ್ಟು ಪ್ರೋತ್ಸಾಹ ನೀಡಬೇಕು. ರೈತರಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ ಕ್ರಮವಹಿಸಬೇಕು. ಗ್ರಾಮೀಣ ಭಾಗದ ಜನರಿಗೆ ವಿದ್ಯುತ್ ಬಿಲ್ ನಲ್ಲಿ ರಿಯಾಯಿತಿ ನೀಡಬೇಕು ಎಂದು ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.
ರೈತರ ಈ ಎಲ್ಲಾ ಸಮಸ್ಯೆಗಳ ವಿಚಾರವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜೂ.5ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು. ನಗರದ ಗನ್ ಹೌಸ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರೈತರು ಮೆರವಣಿಗೆ ತೆರಳಿ ವಿವಿಧ ಬೇಡಿಕೆಗಳಿಗೆ ಒತ್ತಾಯಿಸುತ್ತೇವೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸಲಿದ್ದೇವೆ ಎಂದು ಮಾಹಿತಿ ನೀಡಿದರು.
Key words: mysore-Kuruburu-Shanthakumar – June 5- protest- farmers