ಮಂಗಳೂರು,ಜೂ,12,2020(www.justkannada.in): ಅಕ್ರಮ ಆಸ್ತಿ ಗಳಿಕೆಗೆ ಆರೋಪಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು, ಬೆಂಗಳೂರು ಹಾಗೂ ಮಂಡ್ಯದಲ್ಲಿರುವ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದ ದಾಸೇಗೌಡ ಸದ್ಯ ಲಂಚ ಸ್ವೀಕಾರ ಆರೋಪದಡಿ ಅಮಾನತ್ತಿನಲ್ಲಿದ್ದಾರೆ.
ದಾಸೇಗೌಡ ಸದ್ಯ ರಾಜ್ಯದ ಹಲವೆಡೆ ಅಕ್ರಮ ಆಸ್ತಿ ಹೊಂದಿರುವ ಆರೋಪವಿದೆ. ಇದೀಗ ಎಸಿಬಿ ಅಧಿಕಾರಿಗಳು ದಾಸೇಗೌಡ ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಪರಿಶೀಲನೆ ವೇಳೆ ಮಂಗಳೂರಿನಲ್ಲಿ ಒಂದು ಪ್ಲಾಟ್ ಬೆಂಗಳೂರು ಸೇರಿ ವಿವಿಧೆಡೆ 11 ಸೈಟ್ ಚಿನ್ನಾಭರಣ ಪತ್ತೆಯಾಗಿದೆ ಎನ್ನಲಾಗಿದೆ.
Key words: ACB -attack – KIADB Special Officer- residence