ನವದೆಹಲಿ,ಜೂ,12,2020(www.justkannada.in): ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಖಾಸಗಿ ಕಂಪನಿಗಳಿಗೆ ಸುಪ್ರೀಂಕೋರ್ಟ್ ಸಿಹಿಸುದ್ದಿ ನೀಡಿದೆ.
ಲಾಕ್ ಡೌನ್ ವೇಳೆ ಉದ್ಯೋಗಿಗಳಿಗೆ ಖಾಸಗಿ ಕಂಪನಿಗಳು ವೇತನವನ್ನ ಸಂಪೂರ್ಣವಾಗಿ ನೀಡಬೇಕು ಎಂದು ಕೇಂದ್ರ ಗೃಹ ಇಲಾಖೆ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಖಾಸಗಿ ಕಂಪನಿಗಳು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದವು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಲಾಕ್ ಡೌನ್ ಸಮಯದಲ್ಲಿ ಸಂಬಳ ನೀಡದ ಕಂಪನಿಗಳ ವಿರುದ್ದ ಕ್ರಮ ಬೇಡ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಕೊರೋನಾ ಮಹಾಮಾರಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿತ್ತು. ಹೀಗಾಗಿ ಕಾರ್ಮಿಕರು, ಖಾಸಗಿ ಕಂಪನಿ ಉದ್ಯೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದರು. ಲಾಕ್ ಡೌನ್ ಸಮಯದಲ್ಲಿ ಉದ್ಯೋಗಿಗಳಿಗೆ ಕಂಪನಿಗಳು ವೇತನವನ್ನು ಸಂಪೂರ್ಣವಾಗಿ ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಸುತ್ತೋಲೆ ಹೊರಡಿಸಿತ್ತು.
Key words: No action-against – private companies -lock down-Supreme Court – central government