ಕೆನಡಾ ವಾಟರ್ ನೆಕ್ಸ್ಟ್ ಪ್ರಶಸ್ತಿಗೆ ಕನ್ನಡತಿ ಚಿತ್ರ ಗೌಡ ಆಯ್ಕೆ

ಮೈಸೂರು, ಜೂ.14, 2020 : ( www.justkannada.in news ) : ಕೆನಡಾ ವಾಟರ್ ಶೃಂಗಸಭೆಯು ಕೊಡಮಾಡುವ ವಾಟರ್ ನೆಕ್ಸ್ಟ್ 2020 ವಾರ್ಷಿಕ ಪ್ರಶಸ್ತಿಗೆ ಕನ್ನಡತಿ ಚಿತ್ರ ಗೌಡ ಆಯ್ಕೆಯಾಗಿದ್ದಾರೆ.

ನೀರಿನ ಕಾರ್ಯ ಕ್ಷೇತ್ರದಲ್ಲಿ ತಂತ್ರಜ್ಞಾನ ಮತ್ತು ಯೋಜನೆಗಳ ಮೂಲಕ ಮಹತ್ವದ ಕೊಡುಗೆ ನೀಡಿದ ಸಾಧಕರನ್ನು ಗುರುತಿಸಿ ನೀಡುವ ಈ ಪ್ರಶಸ್ತಿಗೆ ಮೊಟ್ಟ ಮೊದಲ ಬಾರಿಗೆ ಕನ್ನಡತಿಯೊಬ್ಬರು ಆಯ್ಕೆಯಾಗಿರುವುದು ವಿಶೇಷ.

ಚಿತ್ರ ಗೌಡ , ಹಾಸನದ ಚನ್ನರಾಯಪಟ್ಟಣ ತಾಲ್ಲೂಕಿನ ತಗಡೂರು ಗ್ರಾಮದ (ಪುರುದೇಗೌಡರ ಮನೆ) ಡಾ.ಹಾಲಪ್ಪಗೌಡ ಮತ್ತು ರತ್ನಮ್ಮ ಅವರ ಪುತ್ರಿ. ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿ ಪರಿಸರ ಎಂಜಿನಿಯರಿಂಗ್ ಮುಗಿಸಿದ ಚಿತ್ರ, ಉದ್ಯೋಗ ನಿಮಿತ್ತ ಕೆನಡಾದಲ್ಲಿ ನೆಲೆಸಿದ್ದಾರೆ.

ನೀರು ಸಂರಕ್ಷಣೆ, ಜಲಾನಯನ ಮೇಲ್ವಿಚಾರಣೆ ಮತ್ತು ಯೋಜನೆ, ಹವಾಮಾನ ಬದಲಾವಣೆಯ ಮೌಲ್ಯಮಾಪನ, ನೀರಿನ ನೀತಿಗೆ ಸಂಬಂಧಿಸಿದ ಕಾರ್ಯಕ್ರಮಗಳ ಸಂಬಂಧಿಸಿದಂತೆ ಕೆನಡಾದಲ್ಲಿ ಪ್ರಾಂತೀಯ ಸರ್ಕಾರ, ಪುರಸಭೆ ಮತ್ತು ಸಂಘ ಸಂಸ್ಥೆಗಳ ಜೊತೆಯಲ್ಲಿ ಸುಮಾರು 20 ವರ್ಷಗಳಿಂದ ಚಿತ್ರ ಕೆಲಸ ಮಾಡುತ್ತಿದ್ದಾರೆ.

Canada-water-next-award-kannadathi-chitra.gowda-selected-mysore

ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಚಿತ್ರ, ಈ ಸಾಧನೆ ಗೌರವವನ್ನು ತಂದೆ ಹಾಲಪ್ಪಗೌಡ ಅವರಿಗೆ ಸಮರ್ಪಣೆ ಮಾಡುವುದಾಗಿ ತಿಳಿಸಿದ್ದಾರೆ.

 

oooo

key words : Canada-water-next-award-kannadathi-chitra.gowda-selected-mysore