ಬೆಂಗಳೂರು,ಜೂ,18,2020(www.justkannada.in): ಚೀನಾದೊಂದಿಗೆ ನಡೆದ ಘರ್ಷಣೆಯಲ್ಲಿ ನಮ್ಮ ಯೋಧರು ಹುತಾತ್ಮರಾಗಿದ್ದಾರೆ. ಗಡಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಪ್ರಧಾನಿಯವರ ಮೌನ ಸರಿಯಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.
ಇಂದು ನಡೆದ ಶಾಸಕಾಂಗ ಸಭೆಯಲ್ಲಿ ಮಾತನಾಡಿ ಕೇಂದ್ರ ಸರ್ಕಾರದ ವಿರುದ್ದ ಗುಡುಗಿದ ಮಾಜಿ ಸಿಎಂ ಸಿದ್ಧರಾಮಯ್ಯ, ಸಿದ್ದರಾಮಯ್ಯ: ಚೀನಾದೊಂದಿಗೆ ನಡೆದ ಘರ್ಷಣೆಯಲ್ಲಿ ನಮ್ಮ ಯೋಧರು ಹುತಾತ್ಮರಾಗಿದ್ದಾರೆ. ಯೋಧರ ಶೌರ್ಯ, ತ್ಯಾಗ, ಬಲಿದಾನ ಸದಾ ಸ್ಮರಣೀಯ. ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಹಾಗೆಯೇ ನಮ್ಮ ಸೇನೆ ಅತ್ಯಂತ ಶಕ್ತಿಶಾಲಿಯಾಗಿದೆ. ಆದರೆ, ಗಡಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಪ್ರಧಾನಿಯವರ ಮೌನ ವಹಿಸಿರುವುದು ಏಕೆ ಎಂದು ಕಿಡಿಕಾರಿದರು.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ಪೆಟ್ರೋಲ್, ಡೀಸೆಲ್ ಬೆಲೆ ನಿತ್ಯ ಏರಿಕೆಯಾಗುತ್ತಿದೆ. ಕಚ್ಛಾ ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕುಸಿದಿದೆ. ಇದರಿಂದ ಪೆಟ್ರೋಲ್, ಡೀಸೆಲ್ ಲೀಟರ್ ಗೆ 25-30 ರೂ.ಪ್ರಕಾರ ಮಾರಾಟವಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರ ದರ ಏರಿಕೆ ಮೂಲಕ ಮಧ್ಯಮ ವರ್ಗದವರನ್ನು ಬಲಿ ಹಾಕಲು ಹೊರಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮುಂದೆ ಕರಾಳ ಶಾಸನ…
ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ದವೂ ಹರಿಹಾಯ್ದ ಸಿದ್ಧರಾಮಯ್ಯ, ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಟಿದೆ. ಇದು ಮುಂದೆ ಕರಾಳ ಶಾಸನವಾಗಲಿದೆ. ಪಕ್ಷ ಮೊದಲಿನಿಂದಲೂ ಗೇಣಿದಾರರನ್ನು ರಕ್ಷಿಸಿಕೊಂಡು ಬಂದಿತ್ತು. ಇದರ ವಿರುದ್ಧ ಪಕ್ಷದ ವತಿಯಿಂದ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು. ಇದಕ್ಕೆ ಶಾಸಕರು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಜೈಲ್ ಭರೋ ಚಳವಳಿ
ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಪ್ರಧಾನಿ ಮೋದಿಯವರು ದೇಶದ ಆರ್ಥಿಕತೆ ಮತ್ತು ಜನರ ಆರೋಗ್ಯವನ್ನು ಹಾಳು ಮಾಡಲು ಹೊರಟಿದೆ. ಕೇಂದ್ರ, ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಜೈಲ್ ಭರೋ ಚಳವಳಿ ನಡೆಸಲಾಗುವುದು ಎಂದು ಸಿದ್ಧರಾಮಯ್ಯ ಎಚ್ಚರಿಕೆ ನೀಡಿದರು.
ಡಿಕೆಶಿವಕುಮಾರ್ ಪದಗ್ರಹಣದ ಬಗ್ಗೆ ಮಾತನಾಡಿದ ಸಿದ್ಧರಾಮಯ್ಯ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣಕ್ಕೆ ಈಗ ದಿನಾಂಕ ನಿಗದಿಯಾಗಿದೆ. ಜುಲೈ 2 ರಂದು ಪದಗ್ರಹಣಕ್ಕೆ ಸಿದ್ಧತೆ ನಡೆಯುತ್ತಿದೆ. ಶಾಸಕರು ಈ ಸಂಬಂಧ ತಮ್ಮ ಕ್ಷೇತ್ರಗಳಲ್ಲಿ ತಯಾರಿ ಮಾಡಿಕೊಳ್ಳಬೇಕು ಎಂದು ತಮ್ಮ ಶಾಸಕರಿಗೆ ಸೂಚನೆ ನೀಡಿದರು.
ವಿಧಾನ ಪರಿಷತ್ ಚುನಾವಣೆಗೆ ಆಭ್ಯರ್ಥಿಗಳಾಗಿರುವ ಬಿ.ಕೆ. ಹರಿಪ್ರಸಾದ್, ನಸೀರ್ ಅಹಮದ್ ಅವರಿಗೆ ಆಭಿನಂದನೆಗಳು. ಅವರನ್ನು ಆಯ್ಕೆ ಮಾಡಿರುವ ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಿದ್ಧರಾಮಯ್ಯ ತಿಳಿಸಿದರು.
Key words: India-China – conflict –Former CM- Siddaramaiah -against –central govrnament