ಬೆಂಗಳೂರು,ಜು,6,2020(www.justkannada.in): ಕೊರೋನಾ ನಿಯಂತ್ರಣಕ್ಕಾಗಿ ಮೆಡಿಕಲ್ ಉಪಕರಣಗಳ ಖರೀದಿಯಲ್ಲಿ ಅಕ್ರಮವಾಗಿದ್ದರೇ ಅಧಿಕಾರಿಗಳು ಸೇರಿದಂತೆ ತಪ್ಪಿತಸ್ಥರು ಯಾರೇ ಇದ್ದರೂ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿದ್ಧರಾಮಯ್ಯ ಆರೋಪಕ್ಕೆ ಉತ್ತರ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಂಕಿ ಅಂಶಗಳನ್ನು ನೋಡಿಕೊಂಡು ಮಾತನಾಡಲಿ. ಅವರಿಗೆ ದಾಖಲೆಗಳು ಬೇಕಿದ್ದರೆ ಅಧಿಕಾರಿಗಳು ನೀಡುತ್ತಾರೆ. ಅದನ್ನು ನೋಡಿ ಮಾತನಾಡಲಿ. ದಾಖಲೆಗಳಿಲ್ಲದೆ ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಯಾರೇ ಅಕ್ರಮವೆಸಗಿದರೂ ಕ್ರಮ ಕೈಗೊಳ್ಳುತ್ಥೇವೆ ಎಂದು ಹೇಳಿದರು.
ರಾಜ್ಯದಲ್ಲಿ ಕೊರೋನಾ ನಿಯಂತ್ರಿಸಲು ಸರ್ಕಾರ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ. ಆಸ್ಪತ್ರೆಗಳಲ್ಲಿ ಬೆಡ್ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿದ್ದೇವೆ. ಬೆಂಗಳೂರಿನಲ್ಲಿ 10 ಸಾವಿರ ಹಾಸಿಗೆ ವ್ಯವಸ್ಥೆ, ರಾಜ್ಯದಲ್ಲಿ 450 ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದೇವೆ. ಬೇಕಾದರೇ ಒಂದಿಷ್ಟು ಹೆಚ್ಚು ವ್ಯವಸ್ಥೆ ಮಾಡೋಣ ಎಂದು ಸಿಎಂ ಬಿಎಸ್ ವೈ ತಿಳಿಸಿದರು.
ರಾಜ್ಯ ಸರ್ಕಾರ ಎಲ್ಲಿಯೂ ಕೊರೊನಾ ನಿಯಂತ್ರಣ ಮಾಡುವಲ್ಲಿ ವಿಫಲವಾಗಿಲ್ಲ. ಸೋಂಕಿತರಿಗೆ ಚಿಕಿತ್ಸೆ ನೀಡಿವ ಸಂಬಂಧ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಹೀಗಾಗಿ ರಾಜ್ಯದ ಜನ ಭಯಪಡುವ ಅಗತ್ಯವಿಲ್ಲ.ಸರ್ಕಾರಕ್ಕೆ ಜನರು ಸಹಕರಿಸಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ. ದಯವಿಟ್ಟು ಬೆಂಗಳೂರು ಬಿಟ್ಟು ಹೋಗಬೇಡಿ ಎಂದು ಸಿಎಂ ಬಿಎಸ್ ವೈ ಮನವಿ ಮಾಡಿದರು.
Key words: medical equipment- purchase-scam-CM BS yeddyurappa-Siddaramaiah- allegation