ಬೆಂಗಳೂರು,ಜು,10,2020(www.justkannada.in): ಮಾರಕ ಕೋವಿಡ್- 19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜತೆಗೆ, ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.
ಈ ಕುರಿತು ಮಾತನಾಡಿರುವ ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ , ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ಕೈಕೊಳ್ಳಲಾಗಿದೆ. ತೀರ್ಮಾನವನ್ನು ಕೈಗೊಳ್ಳುವ ಮುನ್ನ ಯುಜಿಸಿ ಮಾಡಿರುವ ಶಿಫಾರಸುಗಳು ಹಾಗೂ ಅದರ ನಿಯಮಾವಳಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ತಿಳಿಸಿದರು.
ಕೋವಿಡ್ ಇಡೀ ಶೈಕ್ಷಣಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಸಕಾಲಕ್ಕೆ ತರಗತಿಗಳು ನಡೆಸಲು ಸಾಧ್ಯವಾಗಲಿಲ್ಲ. ಲಾಕ್‌ಡೌನ್ ಸಂದರ್ಭದಲ್ಲಿ ಆನ್‌ಲೈನ್ ಮೂಲಕ ಶಿಕ್ಷಣ ನೀಡಿದ್ದು, ಒಳ್ಳೆಯ ಪ್ರತಿಕ್ರಿಯೆ ಕೂಡ ಬಂದಿದೆ. ಸಾಧ್ಯವಾದಷ್ಟು ಎಲ್ಲರನ್ನೂ ತಲುಪಲು ಪ್ರಾಮಾಣಿಕ ಪ್ರಯತ್ನ ನಡೆಸಲಾಯಿತು. ಇದರ ನಡುವೆ ಕೆಲವು ದಿನಗಳು ತರಗತಿಗಳನ್ನು ನಡೆಸಿ, ಪರೀಕ್ಷೆ ಮಾಡುವ ಚಿಂತನೆಯೂ ಇತ್ತು. ಆದರೆ, ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿರುವ ಕಾರಣಕ್ಕೆ ಅವೆಲ್ಲವನ್ನೂ ಕೈಬಿಟ್ಟು ಮಧ್ಯಂತರ ಸೆಮಿಸ್ಟರ್/ವರ್ಷದ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ನಿರ್ಧರಿಸಲಾಯಿತು. ಅಂತಿಮ ವರ್ಷ/ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಪರೀಕ್ಷೆಗಳನ್ನು (ಆನ್‌ಲೈನ್/ಆಪ್‌ಲೈನ್) ನಡೆಸಲು ಆಯಾ ವಿಶ್ವವಿದ್ಯಾಲಯಗಳಿಗೇ ಸೂಚಿಸಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ವಿವರಿಸಿದ್ದಾರೆ.
ತೇರ್ಗಡೆ ಮಾಡುವುದು ಹೇಗೆ?:
ಮಧ್ಯಂತರ ಸೆಮಿಸ್ಟರ್/ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ (internal marks) ಮತ್ತು ಹಿಂದಿನ ಸೆಮಿಸ್ಟರ್/ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ (comprehensive evaluation) ಆಧಾರದ ಮೇಲೆ ತೇರ್ಗಡೆ ಮಾಡಲಾಗುತ್ತದೆ. ಹಿಂದಿನ ವರ್ಷದ ಅಂಕಗಳು ಇಲ್ಲದ ವಿದ್ಯಾರ್ಥಿಗಳನ್ನು (ಉದಾ: ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳು) ಪೂರ್ಣ ಅಂತರಿಕ ಮೌಲ್ಯಮಾಪನದ ಮೂಲಕವೇ ಉತ್ತೀರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಇದರ ನಡುವೆಯೂ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ವಿದ್ಯಾರ್ಥಿಗಳು ಸೆಮಿಸ್ಟರ್‌ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುವುದು. ಬ್ಯಾಕ್‌ಲಾಗ್ ವಿಷಯಗಳ ಕ್ಯಾರಿ ಓವರ್‌ಗೂ ಅವಕಾಶ ಇರುತ್ತದೆ ಎಂದು ಡಿಸಿಎಂ ತಿಳಿಸಿದರು.
ಏನೇ ಅನುಮಾನಗಳು ಇದ್ದರೂ ಈ ಹೆಲ್ಪ್ ಲೈನ್ ಗೆ ಕರೆ ಮಾಡಬಹುದು. ದೂರವಾಣಿ ಸಂಖ್ಯೆ- 080 22341394
ಅಂತಿಮ ಸೆಮಿಸ್ಟರ್ ಪರೀಕ್ಷೆ ಏಕೆ?:
ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ಮತ್ತು ಅವರ ಉದ್ಯೋಗ- ಮತ್ತಿತರ ಭವಿಷ್ಯಕ್ಕೆ ಧಕ್ಕೆಯಾಗದಂತೆ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಉನ್ನತ ಶಿಕ್ಷಣ ಪದ್ಧತಿಯಲ್ಲಿ ಶೈಕ್ಷಣಿಕ ಮೌಲ್ಯಮಾಪನ ಅಗತ್ಯ. ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷಮತೆಯನ್ನು ಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. ಉದ್ಯೋಗದಾತ ಕಂಪನಿಗಳು ಕೂಡ ಉದ್ಯೋಗಾಕಾಂಕ್ಷಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಅವರು ಗಳಿಸಿರುವ ಶ್ರೇಣಿಯನ್ನು ಗುರುತಿಸುತ್ತವೆ. ಇವರಿಗೆ ಪರೀಕ್ಷೆ ನಡೆಸದಿದ್ದರೆ ಭವಿಷ್ಯದಲ್ಲಿ ತೊಂದರೆಯಾಗುವುದು ಖಚಿತ. ಹೀಗಾಗಿ ಈ ಪರೀಕ್ಷೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ವಿವಿಗಳಿಗೆ ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.
ಸೆಪ್ಟೆಂಬರ್ 1ರಿಂದ ಆನ್‌ಲೈನ್ ತರಗತಿ:
2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್’ಗೆ ಸೆಪ್ಟೆಂಬರ್ 1 ರಿಂದಲೇ ಆನ್‌ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್‌ಲೈನ್ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದರು ಉಪ ಮುಖ್ಯಮಂತ್ರಿ.
ಕೋವಿಡ್- 19 ಇಡೀ ಶೈಕ್ಷಣಿಕ ವ್ಯವಸ್ಥೆಗೆ ದೊಡ್ಡ ಪೆಟ್ಟು ನೀಡಿದೆ. ವಿದ್ಯಾರ್ಥಿಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಅವರ ಭವಿಷ್ಯದ ಬಗ್ಗೆಯೂ ನಿರ್ಧರಿಸುವ ಸವಾಲು ಸರಕಾರದ ಮುಂದಿತ್ತು. ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡಾ.ಸಿ.ಎನ್. ಅಶ್ವತ್ಥನಾರಾಯಣ್ ಹೇಳಿದ್ದಾರೆ.
Summary….
Examinations to be conducted only for final semester students
Intermediate semester students to be promoted
Highlights:
Applicable only to Degree, Post-graduation and Diploma students
Applicable only to academic year 2019-20
Students to be passed based on academic performance
Final semester students to face exams in September
Bengaluru: In a significant move to safeguard students in view of the prevailing Covid19 pandemic, the State Government has taken a decision to promote all intermediate semester students pursuing degree & post-graduation courses including engineering, and diploma courses for the academic year 2019-20 without examinations. Further, the Government also announced that examinations for the final semester students would be conducted before the end of September 2020, as per UGC guidelines. The Hon’ble Governor of Karnataka has given his assent for the same.
The Government has taken this decision after consulting educationalists and university vice chancellors, taking into consideration students’ health, well being and future. UGC guidelines have also been duly taken into account. Announcing this, DyCM & Minister of Higher Education Dr Ashwath Narayan CN added that the decision will be limited to the academic year 2019-20 only.
“Covid19 has disrupted the education system – classes could not be held on time. Online learning introduced during the lockdown has received good responses and the Government promptly tried its best to reach the last person in the chain. Amid these, the Government mulled on conducting offline classes and examinations too, but owing to increase in the viral spread those thoughts have been dropped and it has been decided to pass & promote all intermediate semester students. Concerned Universities have been intimated to conduct examinations for all the final year/semester students” Dr Ashwath Narayan added.
How to pass & promote?
“Intermediate semester students will be assessed based on a comprehensive evaluation scheme with internal assessment marks and previous year’s/semester’s marks considered in a 50:50 ratio. For students in their first semester/year, the evaluation will be completely based on internal assessment marks”, Dr ACN explained.
“If students feel to better their scores, provisions will be made for them to face examinations during the next semester and students who fail to succeed in the comprehensive evaluation process shall face examinations for respective subjects during the next semester. Backlog subjects will be allowed to carry over as well”, DyCM further added.
Why conduct examinations for final semester students?
“Final semester exams will be conducted with due consideration given to students’ academic evaluation and their future lives. Academic evaluation forms the core of the higher education system and hence academic performance of students needs to be considered. Companies too will base their assessments on an individual student’s academic excellence and grades he/she secured. Thus, it would be pushing the students to danger in the future if examinations were not to be conducted now. In this regard, all universities have been informed to prepare themselves and make suitable arrangements for the conduct of final semester examinations”, DyCM corroborated.
Online classes to begin from September 1, 2020:
“Online classes for the academic year 2020-21 will begin from September 1 and offline classes from October 1. All universities and affiliated colleges have been directed to make suitable arrangements in that regard, already”, said Dr ACN.
DCM Quote:
Covid19 has jolted the education system. The cardinal concern the Government had was to safeguard the future of our student friends while keeping them away from contracting infections and keep them in good health. This decision has been arrived at after thorough consultations with academic experts and University VC’s.
-Dr Ashwath Narayan CN
A helpline number has been setup for the concerns of the students – 080-22341394
Key words: Examinations – conducted – final semester –student-Intermediate -semester -students –pass-DCM ashwath narayan