ಮೈಸೂರು,ಜು,20,2020(www.justkannada.in): ರಾಜ್ಯದಲ್ಲಿ ಜಾರಿಗೆ ತರಲು ಮುಂದಾಗಿರುವ ಆನ್ ಲೈನ್ ಶಿಕ್ಷಣವನ್ನ ವಿರೋಧಿಸಿ ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿ ಕಛೇರಿ ಬಳಿ ಚೋರನಹಳ್ಳಿ ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನಾಕಾರರು ಧರಣಿ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಆನ್‌ಲೈನ್ ಶಿಕ್ಷಣ ಕೈ ಬಿಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದರು. ಪ್ರತಿಭಟನೆಯಲ್ಲಿ 50 ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು.
ರಾಜ್ಯದಲ್ಲಿ ಕೊರೋನಾ ಭೀತಿಯಿಂದಾಗಿ ಶಾಲಾಕಾಲೇಜುಗಳನ್ನ ಬಂದ್ ಮಾಡಲಾಗಿದ್ದು ಹೀಗಾಗಿ ಖಾಸಗಿ ಶಾಲೆಗಳು ಆನ್ ಲೈನ್ ಶಿಕ್ಷಣದ ಮೊರೆ ಹೋಗಿವೆ. ಈ ನಡುವೆ ಹೈಕೋರ್ಟ್ ಸಹ ಆನ್ ಲೈನ್ ಶಿಕ್ಷಣಕ್ಕೆ ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದೆ.
Key words: Mysore- protests-against- online education-government.