ಬೆಂಗಳೂರು,ಜೂ,5,2019(www.justkannada.in): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಉಚಿತ ಬಸ್ ಪಾಸ್ ಗೆ ಕೋಕ್ ನೀಡಲು ರಾಜ್ಯ ಸಮ್ಮಿಶ್ರ ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹಿಂದಿನ ಸರ್ಕಾರ ಎಸ್.ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆ ಜಾರಿಗೆ ತಂದಿತ್ತು. ಆದರೆ ಇಂತಹ ಯೋಜನೆಗಳಿಂದ ವಿದ್ಯಾರ್ಥಿಗಳ ನಡುವೆ ತಾರತಮ್ಯವಾಗಲಿದೆ. ವಿದ್ಯಾರ್ಥಿ ಮಟ್ಟದಲ್ಲೇ ಜಾತಿ ಬೀಜ ಹುಟ್ಟುಕೊಳ್ಳುತ್ತದೆ ಹೀಗಾಗಿ ಉಚಿತ ಬಸ್ ಪಾಸ್ ಯೋಜನೆಗೆ ಕೋಕ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು ಈ ಬಗ್ಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ಉಚಿತ ಬಸ್ ಪಾಸ್ ಗೆ ಕೋಕ್ ನೀಡುವ ಸಂಬಂಧ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುತ್ತದೆ. ಸಮಿತಿಯಲ್ಲಿ ಚರ್ಚಿಸಿ ಉಚಿತ ಬಸ್ ಪಾಸ್ ಗೆ ಕೋಕ್ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Key words: Government thinking to To drop freebus pass of SC, and ST students.
#Government #drop #freebuspass #ScSTstudents.