ಮೈಸೂರು, ಆಗಸ್ಟ್ 04, 2020 (www.justkannada.in): ಶಾಲಾ-ಕಾಲೇಜುಗಳನ್ನು ಆಗಸ್ಟ್ 31ರವರೆಗೆ ಮುಚ್ಚುವ ಸಂಬಂಧ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೆ ಶಿಕ್ಷಕರ ಕೆಲಸ ನಿರ್ವಹಣೆ ಸಂಬಂಧ ಉದ್ಭವಿಸಿದ್ದ ಗೊಂದಲಗಳಿಗೆ ಇಂದು ಸಂಜೆಯೊಳಗೆ ಸರಕಾರ ಸ್ಪಷ್ಟನೆ ನೀಡಲಿದೆ.
ಈ ಸಂಬಂಧ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಸ್ಪಷ್ಟನೆ ನೀಡಿದ್ದಾರೆ. ಮಕ್ಕಳು ಬರಬಾರದೆಂಬ ಉದ್ದೇಶದಿಂದ ಶಾಲೆಗಳನ್ನು ಮುಚ್ಚಲಾಗಿದೆ. ಇನ್ನು ಆನ್ ಲೈನ್ ಶಿಕ್ಷಣ ನೀಡುವುದರ ಜತೆಗೆ ಮಕ್ಕಳ ಕುಂದುಕೊರತೆಗಳನ್ನು ಆಲಿಸುವ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲು ಶಿಕ್ಷಣ ಇಲಾಖೆ ಆಯುಕ್ತರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಶಿಕ್ಷಣ ಸಚಿವರು ಹಾಗೂ ಸರಕಾರ ಈ ಪ್ರಸ್ತಾವನೆಯನ್ನು ಪರಿಶೀಲಿಸಿ ಇಂದು ಸಂಜೆ ಅಥವಾ ನಾಳೆ ಅಂತಿಮ ಆದೇಶದಲ್ಲಿ ಸೂಕ್ತ ನಿರ್ದೇಶನ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.