ಮೈಸೂರು,ಆ,6,2020(www.justkannada.in): ಮೈಸೂರು, ಕೊಡಗು ಸೇರಿ ಮಲೆನಾಡು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರಸಿದ್ದ ಗೋಲ್ಡನ್ ಟೆಂಪಲ್ಗೆ ತೆರಳುವ ಸೇತುವೆ ಬಂದ್ ಆಗಿದೆ.
ಮಳೆರಾಯನ ಆರ್ಭಟದಿಂದಾಗಿ ಹಾರಂಗಿ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ ಮಾಡಲಾಗಿದ್ದು ಈ ಹಿನ್ನೆಲೆ ಪಿರಿಯಾಪಟ್ಟಣದ ಕೊಪ್ಪ ಗ್ರಾಮದಲ್ಲಿ ಸೇತುವೆ ಮುಳುಗಡೆಯಾಗಿದೆ. ಜತೆಗ ಪ್ರಸಿದ್ದ ಗೋಲ್ಡನ್ ಟೆಂಪಲ್ಗೆ ತೆರಳುವ ಸೇತುವೆ ಬಂದ್ ಆಗಿದೆ. ಹೀಗಾಗಿ ಗೊಲ್ಡನ್ ಟೆಂಪಲ್ ತೆರಳಲು ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಲಾಗಿದೆ.
ಭಾರಿ ಮಳೆಯಿಂದಾಗಿ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಭತ್ತದ ಗದ್ದೆಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಒಟ್ಟಾರೆ ರಾಜ್ಯದಲ್ಲಿ ಬೆಂಬಿಡದೆ ಸುರಿಯುತ್ತಿರುವ ವರುಣಾಘಾತಕ್ಕೆ ಜನ ತತ್ತರಿಸಿದ್ದಾರೆ.
Key words: Heavy rains –mysore- Periyapattina-bridge – Golden Temple.