ಬೆಂಗಳೂರು,ಆ,7,2020(www.justkannada.in): ಕೊರೋನಾ ಪರೀಕ್ಷಾ ವರದಿಯನ್ನು ಪರಿಣಾಮಕಾರಿಯಾಗಿ ಪಡೆಯುವ ಹಿನ್ನೆಲೆ, ರೋಗಲಕ್ಷಣ ಹೊಂದಿರುವವರು ಕಡ್ಡಾಯವಾಗಿ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಗಲಕ್ಷಣ ಹೊಂದಿರುವವರು ಕಡ್ಡಾಯವಾಗಿ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಬೇಕು. ರ್ಯಾಪಿಡ್ ಆಂಟಿಜನ್ ಟೆಸ್ಟ್ ಜೊತೆ ಆರ್ಟಿಪಿಸಿಆರ್ ಪರೀಕ್ಷೆಗೊಳಪಡುವಂತೆ ಸೂಚನೆ ನೀಡಿದೆ.
ಕೊರೋನಾ ರೋಗ ಲಕ್ಷಣ ಇರುವವರಿಗೂ ಕೇವಲ ರ್ಯಾಪಿಡ್ ಆಂಟಿಜನ್ ಟೆಸ್ಟ್ ಮಾತ್ರ ಮಾಡಲಾಗುತ್ತಿತ್ತು. ಆದರೆ ರೋಗಲಕ್ಷಣ ಹೊಂದಿರುವವರ ರ್ಯಾಪಿಡ್ ಆಂಟಿಜನ್ ಟೆಸ್ಟ್ ನ ವರದಿಯಲ್ಲಿ ನೆಗೆಟಿವ್ ಬರುತ್ತಿರುವ ಹಿನ್ನೆಲೆ ಪರೀಕ್ಷೆ ವರದಿ ಪರಿಣಾಮಕಾರಿಯಾಗಿ ಪಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಈ ನೂತನ ಆದೇಶ ಹೊರಡಿಸಿದೆ.
Key words: Corona- Symptoms – RTPCR –testing- Order – Health Department