ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಕೆಪಿಸಿಸಿ ಅಧ್ಯಕ್ಷರಿಂದ ಧಮ್ಕಿ- ಡಿಕೆಶಿ ವಿರುದ್ದ ಸಚಿವ ಸುಧಾಕರ್ ಕಿಡಿ …

ಬೆಂಗಳೂರು,ಆ,21,2020(www.justkannada.in):  ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತರು ಬಿಜೆಪಿ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಸಚಿವ ಡಾ.ಕೆ. ಸುಧಾಕರ್ ತಿರುಗೇಟು ನೀಡಿದ್ದಾರೆ.jk-logo-justkannada-logo

ಈ ಕುರಿತು ಟ್ವಿಟ್ಟರ್ ನಲ್ಲಿ ಡಿ.ಕೆ ಶಿವಕುಮಾರ್ ಅವರನ್ನ ಕುಟುಕಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಗಲಭೆ ಪ್ರಕರಣದ ಕಿಡಿಗೇಡಿಗಳ ವಿರುದ್ಧ ಪ್ರಾಮಾಣಿಕ ತನಿಖೆ ನಡೆಸುತ್ತಿರುವ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಸಾರ್ವಜನಿಕವಾಗಿ ಧಮ್ಕಿ ಹಾಕಿದ್ದಾರೆ ಮತ್ತು ಬಿಜೆಪಿ ಏಜೆಂಟ್ ಎಂದು ನಿಂದಿಸಿದ್ದಾರೆ. ಪ್ರಾಮಾಣಿಕ ತನಿಖೆಯ ಬಗ್ಗೆ ಇಷ್ಟು ಭಯ ಏಕೆ  ಮಿಸ್ಟರ್ ಡಿಕೆ ಶಿವಕುಮಾರ್ ಅವರೇ? ಯಾರನ್ನು ರಕ್ಷಿಸಲು ಈ ಪ್ರಯತ್ನ? ಎಂದು ಚಾಟಿ ಬೀಸಿದ್ದಾರೆ.KPCC president –D.K Shivakumar- Police Commissioner- Kamal Pant-damki-Minister -Sudhakar

ಡಿ.ಜೆ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿಜೆಪಿ ನಾಯಕರು ಪೊಲೀಸರ ಮೇಲೆ ಒತ್ತಡ ಹಾಕುತ್ತಿದ್ದಾರೆ.  ಬೆಂಗಳೂರು ಪೊಲೀಸ್ ಆಯುಕ್ತರು ಬಿಜೆಪಿ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದರು.

Key words: KPCC president –D.K Shivakumar- Police Commissioner- Kamal Pant-damki-Minister -Sudhakar