ಮಂಡ್ಯ,ಆ,21,2020(www.justkannada.in): ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು ಇಂದು ಸಿಎಂ ಬಿಎಸ್ ಯಡಿಯೂರಪ್ಪ ಬಾಗಿನ ಅರ್ಪಿಸಿದರು.
ಹೆಲಿಕಾಪ್ಟರ್ ಮೂಲಕ ಬೆಂಗಳೂರಿನಿಂದ ಕೆ.ಆರ್ ಎಸ್ ಗೆ ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪ ಭರ್ತಿಯಾಗಿರುವ ಕೆ.ಆರ್ ಎಸ್ ಜಲಾಶಯಕ್ಕೆ ಗೌರಿಹಬ್ಬದ ದಿನವೇ ಬಾಗಿನ ಅರ್ಪಿಸಿದರು. ಬಾಗಿನ ಅರ್ಪಿಸಿದ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು. ಸಿಎಂ ಆಗಿ ಬಿಎಸ್ ಯಡಿಯೂರಪ್ಪ 5ನೇ ಬಾರಿಗೆ ಕೆಆರ್ ಎಸ್ ಗೆ ಬಾಗಿನ ಅರ್ಪಿಸಿದ್ದಾರೆ.
ಬಾಗಿನ ಸಮರ್ಪಣೆ ವೇಳೆ ಮಂಢ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜಸಾಗರ ಜಲಾಶಯ. ಸಿಎಂ ಬಿಎಸ್ ಯಡಿಯೂರಪ್ಪ ಬಾಗಿನ ಅರ್ಪಣೆ ವೇಳೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸಚಿವ ಎಸ್.ಟಿ ಸೋಮಶೇಖರ್, ಸಂಸದೆ ಸುಮಲತಾ ಅಂಬರೀಶ್, ಶಾಸಕ ರವೀಂದ್ರ ಶ್ರೀಕಂಠಯ್ಯ, ಹಾಗೂ ಮಂಡ್ಯ ಜಿಲ್ಲಾಧಿಕಾರಿ ವೆಂಕಟೇಶ್ ಉಪಸ್ಥಿತರಿದ್ದರು.
Key words: CM BS Yeddyurappa -offered –bagina-mandya- KRS dam- ministers