ಬೆಂಗಳೂರು, ಆಗಸ್ಟ್ 23, 2020 (www.justkannada.in): ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಇಂದು ಪದಾಕಾರಿಗಳ ಜೊತೆ ಸರಣಿ ಸಭೆ ನಡೆಸಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಹಿರಿಯ ಉಪಾಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಖಜಾಂಚಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಪದಾಕಾರಿಗಳ ಜೊತೆ ಸಭೆ ನಡೆಸಲಾಗಿದೆ.
ಹಳೆ ಮೈಸೂರು ಭಾಗದ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಸಂಘಟನೆ ಹಿನ್ನಡೆ ಇರುವ ಕಡೆ ಪಕ್ಷವನ್ನು ಬಲಪಡಿಸುವ ಬಗ್ಗೆ ಚರ್ಚೆ ನಡೆದಿದೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ಸಂತೋಷ್ ಸಂಘಟನೆ, ಸರ್ಕಾರ ಮತ್ತು ಪಕ್ಷದ ನಡುವೆ ಸ್ವಲ್ಪವೂ ವ್ಯತ್ಯಾಸವಿಲ್ಲದಂತೆ ಸುಸೂತ್ರವಾಗಿ ನಡೆಯಲು ಸಲಹೆ ಪಡೆದಿದ್ದರು.