ಬೆಂಗಳೂರು,ಆ,27,2020(www.justkannada.in): ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಬಳಿ ಇರುವ ಮೇಲ್ಸೇತುವೆಗೆ ಸಂಗೊಳ್ಳಿ ರಾಯಣ್ಣ ಎಂದು ಹೆಸರು ನಾಮಕರಣ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಸಂಗೊಳ್ಳಿ ರಾಯಣ್ಣ ಬ್ರಿಟೀಷರ ವಿರುದ್ದ ಹೋರಾಡಿದ ಕನ್ನಡದ ಕಲಿ. ರಾಯಣ್ಣ ಯುವ ಜನತೆಗೆ ಸ್ಪೂರ್ತಿ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ನಾಮಕರಣ ಔಚಿತ್ಯ ಪೂರ್ಣ ಎಂದು ಹೇಳಿದರು.
ಬೆಂಗಳೂರು ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಬೆಂಗಳೂರಿಗೆ ಮೂಲಭೂತ ಸೌಕರ್ಯ ಒದಗಿಸುತ್ತೇವೆ. ಶೀಘ್ರವೇ ನಮ್ಮ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ಪ್ರತಿಭಟನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ, ಈ ಕುರಿತು ಸ್ವಾಮೀಜಿಗಳ ಜತೆ ಮಾತುಕತೆ ನಡೆಸಿದ್ದೇನೆ. ಗೊಂದಲ ಇಲ್ಲದಂತೆ ವಿವಾದ ಬಗೆಹರಿಸುವಂತೆ ತಿಳಿಸಿದ್ದೇನೆ ಎಂದರು.
Key words: sangolli rayanna-name –bridge-Anand Rao Circle- CM BS Yeddyurappa.