ಬೆಂಗಳೂರು,ಆ,28,2020(www.justkannada.in): ನೆರೆಪೀಡಿತ ಜಿಲ್ಲೆಗಳ ಜೆಡಿಎಸ್ ಕಾರ್ಯಕರ್ತರು ಮುಖಂಡರ ಜತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ನೆರೆ ಹಾವಳಿ ಬಗ್ಗೆ ಚರ್ಚಿಸಿದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ತಾಲೂಕಿನ ಅಧ್ಯಕ್ಷರು, ಜಿಲ್ಲಾಧ್ಯಕ್ಷರು ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಕೆ ಕುಮಾರಸ್ವಾಮಿಯವರು ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳು ಕಳೆದ ಎರಡು ವರ್ಷಗಳಿಂದ ನೆರೆ ಹಾವಳಿಯಿಂದ ತತ್ತರಿಸಿದ್ದು ಸರ್ಕಾರವು ನೊಂದವರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಕಲ್ಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.
ಕೊರೊನಾದ ಇಂತಹ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿಯನ್ನು ಅರಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವೀಡಿಯೋ ಸಂವಾದವನ್ನು ಏರ್ಪಡಿಸಲಾಗಿತ್ತು.
Key words: Video conference- former Prime Minister- HD Deve Gowda – JDS leaders –flood- districts.