ಪಂಚಾಯತ್ ಚುನಾವಣೆ : ಪಕ್ಷ ಸಂಘಟನೆಗೆ ಕರೆ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಹೆಚ್.ಡಿಕೆ…

ಬೆಂಗಳೂರು, ಆಗಸ್ಟ್,03,2020(www.justkannda.in) ; ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ,ಮಾಜಿ‌ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮುಂಬರುವ ಪಂಚಾಯತಿ ಚುನಾವಣೆಯಲ್ಲಿ ಪಕ್ಷವನ್ನು ವ್ಯವಸ್ಥಿತವಾಗಿ ಸಂಘಟನೆ ಮಾಡುವ ಉದ್ದೇಶದಿಂದ ವಿವಿಧ ಜಿಲ್ಲೆಯ ಪಕ್ಷದ ಮುಖಂಡರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.

jk-logo-justkannada-logo

ರಾಜ್ಯದಲ್ಲಿನ ಗ್ರಾಮಪಂಚಾಯತಿಗಳ ಅವಧಿಯು ಮುಗಿದಿದ್ದು, ಮುಂಬರುವ ಪಂಚಾಯತಿ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಬಳ್ಳಾರಿ, ಬೀದರ್ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಶಾಸಕರು, ತಾಲೂಕು ಅಧ್ಯಕ್ಷರು ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.

ಇದೇ ವೇಳೆ ಪಂಚಾಯತಿ ಚುನಾವಣೆಗೆ ನಿಗದಿಪಡಿಸಿರುವ ಸ್ಥಾನ, ಮೀಸಲಾತಿಯು ರಾಜಕೀಯ ವೈರತ್ವ ಹಾಗೂ ದುರುದ್ದೇಶದಿಂದ ಕೂಡಿದ್ದು, ಈ ಕುರಿತು ಹೋರಾಟ ನಡೆಸುವ ಬಗ್ಗೆಯೂ ಚರ್ಚಿಸಲಾಯಿತು.

ರಾಜ್ಯದಲ್ಲಿ  ಭೀಕರ ಮಳೆ ಮತ್ತು ನೆರೆ ಹಾವಳಿಯಿಂದ ಭಾಧಿತವಾದ ಜಿಲ್ಲೆಗಳಲ್ಲಿ ಪ್ರವಾಹ ಪೀಡಿತರಿಗೆ ಪರಿಹಾರ ನೀಡಲು ವಿಫಲವಾಗಿದ್ದು, ಕೊರೊನಾ ಸಂಕಷ್ಟದ ಇಂತಹ‌ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ‌ ನೀಡಿ ವಸ್ತು ಸ್ಥಿತಿ ಯನ್ನು ಅರಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ವೀಡಿಯೋ ಸಂವಾದ ಏರ್ಪಡಿಸಲಾಗಿತ್ತು.

key words ; former-Prime-Minister-H.D.Deve Gowda-former-Chief-Minister H.D.Kumaraswamy-video-conference?