ವಿಜಯಪುರ, ಸೆಪ್ಟಂಬರ್,3,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಈ ನಡುವೆ ಶೀಘ್ರದಲ್ಲಿ ಕರ್ನಾಟಕ ಡ್ರಗ್ಸ್ ಮುಕ್ತ ರಾಜ್ಯವಾಗಲಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಜಯಪುರದಲ್ಲಿ ಇಂದು ಮಾತನಾಡಿರುವ ಡಿಜಿ&ಐಜಿಪಿ ಪ್ರವೀಣ್ ಸೂದ್, ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಲವೆಡೆ ದಾಳಿ ಮಾಡಿ ಡ್ರಗ್ಸ್ ಅನ್ನು ವಶಕ್ಕೆ ಪಡೆಯಲಾಗುತ್ತಿದೆ. ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಲು ಎಸ್ ಪಿಗಳಿಗೆ ಸೂಚನೆ ನೀಡಿದ್ದೇವೆ ಎಂದರು.
ರಾಜ್ಯದಲ್ಲಿ ಡ್ರಗ್ಸ್ ಪತ್ತೆ ಹಚ್ಚುವುದು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವ ಮೂಲಕ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿಸಲು ತೀರ್ಮಾನ ಮಾಡಲಾಗಿದೆ ಎಂದು ಡಿಜಿ ಐಜಿಪಿ ಪ್ರವೀಣ್ ಸೂದ್ ತಿಳಿಸಿದರು.
Key words: Soon- Karnataka- Drugs Free –State-DG & IGP Pravin Sood -Confidence.