ಮೈಸೂರು,ಸೆಪ್ಟಂಬರ್,9,2020(www.justkannada.in): ಡ್ರಗ್ಸ್ ದಂಧೆಯಲ್ಲಿ ಪ್ರಭಾವಿಗಳು, ಸಿನಿಮಾ ನಟ, ನಟಿಯರ ಹೆಸರು ಕೇಳಿ ಬರುತ್ತಿದ್ದು. ಈ ಹಿನ್ನೆಲೆ ಡ್ರಗ್ಸ್ ಜಾಲದ ವಿರುದ್ದ ಮೈಸೂರಿನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ಮತ್ತು ಸಂಜನಾ ಅವರನ್ನ ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ ನಶಾಮುಕ್ತ ಭಾರತಕ್ಕಾಗಿ ಮೈಸೂರಿನಲ್ಲಿ ಎಬಿವಿಪಿ ವತಿಯಿಂದ ಸಹಿಸಂಗ್ರಹ ಅಭಿಯಾನ ನಡೆಸಲಾಯಿತು.
ಮೈಸೂರಿನ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣದ ಮುಂಭಾಗ ಸಹಿಸಂಗ್ರಹಿಸಿದ ಎಬಿವಿಪಿ ಸದಸ್ಯರು, ಡ್ರಗ್ ಜಾಲದಲ್ಲಿ ಪ್ರಭಾವಿಗಳು, ಸಿನಿಮಾ ನಟಿಯರು ತೊಡಗಿಕೊಂಡಿರೋದು ವಿಷಾದನೀಯ. ರಾಷ್ಟ್ರಘಾತುಕ ಚಟುವಟಿಕೆಯಲ್ಲಿ ತೊಡಗಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಮತ್ರಷ್ಟು ಮಂದಿ ಭಾಗಿಯಾಗಿರುವ ಶಂಕೆ ಇದೆ. ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
Key words: Mysore – ABVP-Signature- Collection Campaign -Against -Drugs Network.