ಹಿಂದಿ ಭಾಷೆಯನ್ನು ಆಸಕ್ತಿಯಿದ್ದವರು ಕಲಿಯಲಿ ಒತ್ತಾಯ ಬೇಡ : ಪ್ರೊ.ಕೆ.ಎಸ್.ಭಗವಾನ್

ಮೈಸೂರು,ಸೆಪ್ಟೆಂಬರ್,11,2020 :ಹಿಂದಿ ಭಾಷೆ ಯಾರಿಗೆ ಆಸಕ್ತಿ ಇದೆಯೂ ಅವರು ಕಲಿತರೆ ನಮ್ಮ ಅಭ್ಯಂತರವಿಲ್ಲ. ಆದರೆ, ಒತ್ತಾಯಪೂರ್ವಕವಾಗಿ ಹಿಂದಿ ಭಾಷೆ ಹೇರಿಕೆ ಸಲ್ಲದು ಎಂದು ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಹೇಳಿದರು.

jk-logo-justkannada-logo

ನಗರದ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಭಾಂಗಣದಲ್ಲಿ ಶುಕ್ರವಾರ ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಸಂಬಂಧ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಹಾಗೂ ಕನ್ನಡ ಸಾಹಿತ್ಯ ಸಂಘಟನೆಗಳ ಒಕ್ಕೂಟದ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಹಿಂದಿ ಭಾಷೆ ಹೇರುವ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ. ಹೊಸ ಶಿಕ್ಷಣ ನೀತಿ ಜಾರಿ ಮಾಡುವ ಮೂಲಕ ಇಂಗ್ಲೀಷ್, ಹಿಂದಿ ಹಾಗೂ ಸ್ಥಳೀಯ ಭಾಷೆಗೆ ಒತ್ತು ನೀಡಿ ತ್ರಿಭಾಷಾ ಸೂತ್ರ ಅನುಸರಿಸುತ್ತಿದೆ. ಇದು ಸ್ಥಳೀಯ ಭಾಷೆಗೆ ಮಾರಕವಾಗುವ ನೀತಿಯಾಗಿದೆ ಎಂದು ಕಿಡಿಕಾರಿದರು.

Let-those-who-are-interested-Hindi-learn-Don't insist-Prof. K.S.Bhagwan

ಜಿಲ್ಲಾಧಿಕಾರಿ ಕಚೇರಿ ಬಳಿ ಸೆ.14ರಂದು ಪ್ರತಿಭಟನೆ

ಇಂಗ್ಲೀಷ್ ನಲ್ಲಿರುವಷ್ಟು ಜ್ಞಾನ ಸಂಸ್ಕೃತ ಭಾಷೆಯಲ್ಲಿಲ್ಲ. ಹಿಂದಿ ಭಾಷೆ ಹೇರಿಕೆ ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಸೆ.14ರಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಕೇಂದ್ರ ಸರಕಾರ ಬ್ಯಾಂಕಿಂಗ್ ಸೇರಿದಂತೆ ಅನೇಕ ಉದ್ಯೋಗಾಧಾರಿತ ಪರೀಕ್ಷೆಗಳನ್ನು ಹಿಂದಿ ಭಾಷೆಯಲ್ಲಿ ನಡೆಸುವ ಮೂಲಕ ದಕ್ಷಿಣ ರಾಜ್ಯಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.

ಸಭೆಯಲ್ಲಿ ಪ್ರೊ.ನಂಜರಾಜ್ ಅರಸ್, ಡಾ.ಶಿವಕುಮಾರ್, ಕಸಾಪ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್, ಮಡ್ಡಿಕೆರೆ ಗೋಪಾಲ್,  ಕನ್ನಡಪರ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ, ಮೈಸೂರು ವಿವಿ ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವಯ್ಯ ಇತರರು ಇದ್ದರು.

key words : Let-those-who-are-interested-Hindi-learn-Don’t insist-Prof. K.S.Bhagwan