ಬೆಂಗಳೂರು, ಜೂ,10,2019(www.justkannada.in): ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕನ್ನಡದ ಮೇರು ನಾಟಕಕಾರ ಗಿರೀಶ್ ಕಾರ್ನಾಡ್(81) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಬೆಂಗಳೂರಿನ ಲ್ಯಾವಲ್ಲೆರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಇಂದು ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಇಂದು ಕೊನೆಯುಸಿರೆಳೆದಿದ್ದಾರೆ.
ಗಿರೀಶ್ ಕಾರ್ನಾಡ್ ಅವರು 1938ರ ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಡಾ.ರಘುನಾಥ್ ಕಾರ್ನಾಡ್, ಕೃಷ್ಣಾ ಬಾಯಿ ಪುತ್ರರಾಗಿ ಜನಿಸಿದ್ದರು. ಪ್ರಗತಿಶೀಲ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದುಕೊ೦ಡಿದ್ದರು.
ಗಿರೀಶ್ ಕಾರ್ನಾಡ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ -1974, ಪದ್ಮಭೂಷಣ -1992, ಜ್ಞಾನಪೀಠ -1998,ಕಾಳಿದಾಸ ಸಮ್ಮಾನ್ – 1998ರಲ್ಲಿ ಲಭಿಸಿವೆ.
Key words: senior writer ,Jnanpith Award winner Girish Karnad died.
#Bangalore #senior writer #Girish Karnad #died.