ಮೈಸೂರು, ಸೆಪ್ಟೆಂಬರ್, 12,2020(www.justkannada.in) :ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಕೊರೊನಾ ವಾರಿಯರ್ಸ್ ಉದ್ಘಾಟನೆ ಮಾಡಲಿದ್ದು, ಕೊರೊನಾ ವಾರಿಯರ್ಸ್ ಆಯ್ಕೆಯು ಆಯಾ ಇಲಾಖೆಯ ಮುಖ್ಯಸ್ಥರಿಗೆ ಬಿಟ್ಟಿದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಶನಿವಾರ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದ್ದು, ಪ್ರತಿವರ್ಷದಂತೆ ಈ ಬಾರಿಯು ವಿದ್ಯುತ್ ದೀಪಾಲಂಕಾರವಿರುತ್ತದೆ. ದಸರಾ ಅಂಗವಾಗಿ 9 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರೀಯ, ಅಂತಾರಾಷ್ಟ್ರೀಯ ಕಲಾವಿದರು ಆಗಮಿಸಲಿದ್ದಾರೆ ಎಂದರು.
ವೀರನಹೊಸಹಳ್ಳಿಯಲ್ಲಿ ಗಜಪಯಣ ಕಾರ್ಯಕ್ರಮವಿರುವುದಿಲ್ಲ. ನೇರವಾಗಿ ಅರಮನೆಗೆ ದಸರಾ ಗಜಪಡೆ ಆಗಮಿಸಲಿವೆ ಎಂದು ತಿಳಿಸಿದ್ದಾರೆ.
key words :Dasara-Inauguration-Corona-Warriors-shoulders-heads-respective-departments-Minister ST Somashekhar