ಬೆಂಗಳೂರು,ಸೆಪ್ಟೆಂಬರ್,18,2020(www.justkannada.in) : ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚಿಸಿದ್ದು, ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಚರ್ಚಿಸುವಂತೆ ಸೂಚಿಸಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದ ಅಭಿವೃದ್ದಿ ವಿಚಾರಗಳ ಬಗ್ಗ್ಗೆ ಪ್ರಧಾನಿ ಚರ್ಚಿಸಿದ್ದು, ಕೊವಿಡ್ ಹಿನ್ನೆಲೆಯಲ್ಲಿ ಎಚ್ಚರಿಯಿಂದ ಇರಲು ತಿಳಿಸಿದ್ದಾರೆ ಎಂದು ಹೇಳಿದರು.
ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಜತೆ ಚರ್ಚಿಸಲು ಸೂಚಿಸಿದ್ದು, ಹೀಗಾಗಿ ಸಂಜೆ ಜೆ.ಪಿ ನಡ್ಡಾ ಅವರನ್ನ ಭೇಟಿಯಾಗಿ ಸಮಾಲೋಚನೆ ನಡೆಸುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
key words : Prime Minister-instructs-JP Nadda-discuss-volume-expansion-B.S.Y.