ಬೆಂಗಳೂರು,ಸೆಪ್ಟಂಬರ್,21,2020(www.justkannada.in): ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು ಇಂದು ಅಧಿವೇಶನದಲ್ಲಿ ಪ್ರಮುಖ ಅಂಶಗಳ ಚರ್ಚೆ ನಡೆಯಲಿದೆ. ಈ ನಡುವೆ ಮೈಸೂರು ಜಿಲ್ಲೆಯ ಇಬ್ಬರು ಶಾಸಕರು ಅಧಿವೇಶನಕ್ಕೆ ಗೈರಾಗಿದ್ದಾರೆ.
ಇಂದು ಬೆಳಗ್ಗೆ 11ಗಂಟೆಯಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಿದ್ದು, ಸದನಕ್ಕೆ ಹಾಜರಾಗುವ ಸದಸ್ಯರು ಕೊರೋನಾ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿದೆ. ಹೀಗಾಗಿ ಮೈಸೂರು ಭಾಗದ ಶಾಸಕರಾದ ಹೆಚ್ ಮಂಜುನಾಥ್ ಮಹದೇವ್ ಇಬ್ಬರಿಗೂ ಕೊರೋನಾ ಸೋಂಕು ತಗುಲಿದ್ದು ಈ ಹಿನ್ನೆಲೆ ಅಧಿವೇಶನಕ್ಕೆ ಗೈರಾಗಿದ್ದಾರೆ.
ಕೊರೋನ ಪಾಸಿಟಿವ್ ಹಿನ್ನೆಲೆ ಹುಣಸೂರು ಶಾಸಕ ಹೆಚ್ ಮಂಜುನಾಥ್ ಹಾಗೂ ಪಿರಿಯಾಪಟ್ಟಣ ಶಾಸಕ ಮಹದೇವ್ ಇಬ್ಬರು ಅಧಿವೇಶನದಿಂದ ದೂರ ಉಳಿದಿದ್ದಾರೆ.
Key words: Mysore -district – Two MLAs –corona-session-absent