ಮೈಸೂರು,ಸೆಪ್ಟಂಬರ್,23,2020(www.justkannada.in): ಕಳೆದ 12 ವರ್ಷಗಳಿಂದಲೂ ನೆನಗುದಿಗೆ ಬಿದ್ದರುವ ‘ಅಂಬೇಡ್ಕರ್ ಭವನ’ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಮೈಸೂರು ಮಾಜಿ ಮೇಯರ್ ಪುರುಷೋತ್ತಮ್ ಒತ್ತಾಯಿಸಿದ್ದಾರೆ.
ನಗರದ ದಿವಾನ್ಸ್ ರಸ್ತೆಯಲ್ಲಿ ನೂತನ ಅಂಬೇಡ್ಕರ್ ಭವನ ನಿರ್ಮಾಣವಾಗುತ್ತಿದ್ದು ಈ ಕಾಮಗಾರಿಯನ್ನ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಮಾಜಿ ಮೇಯರ್ ಪುರುಷೋತ್ತಮ್ ಎಚ್ಚರಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಅಂಬೇಡ್ಕರ್ ಭವನಕ್ಕೆ ನನ್ನ ಅವಧಿಯಲ್ಲಿ ಪಾಲಿಕೆಯಿಂದ ಮೂರು ಕೋಟಿ ಬಿಡುಗಡೆ ಮಾಡಲಾಗಿದೆ. ಮುಡಾದಿಂದ 10, ಸಮಾಜ ಕಲ್ಯಾಣ ಇಲಾಖೆಯಿಂದ 7 ಕೋಟಿ ಬಿಡುಗಡೆಯಾಗಿದೆ. ಒಟ್ಟು 20 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಇನ್ನೂ ಇಪ್ಪತ್ತು ಕೋಟಿಗೆ ಬೇಡಿಕೆಯಿದೆ. ಆದರೂ ಕೂಡ ಸರ್ಕಾರಗಳು ಹಣ ಕೊಡುವುದಕ್ಕೆ ಮುಂದಾಗುತ್ತಿಲ್ಲ. ಕಾಮಗಾರಿ ಪೂರ್ಣ ಮಾಡುವುದಕ್ಕೆ ಯಾರಿಗೂ ಇಷ್ಟವಿಲ್ಲ ಎಂದು ಕಿಡಿಕಾರಿದ್ದಾರೆ.
ಈ ಸಂಬಂಧ ಮುಡಾ ಅಧ್ಯಕ್ಷ ರಾಜೀವ್ ಗೆ ಸದ್ಯದಲ್ಲೇ ಮನವಿ ಸಲ್ಲಿಸುತ್ತೇನೆ. ಆರು ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳ್ಖಬೇಕು. ಇಲ್ಲವಾದರೆ ನಿರಂತರವಾಗಿ ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
Key words: Former mayor- Purushottam – Ambedkar Bhavan.- complete-govrnament