ಬೆಂಗಳೂರು,ಜೂ,11,2019(www.justkannada.in): ಮುಂದಿನ ಐದು ವರ್ಷಗಳಲ್ಲಿ ರಾಜ್ಯಾದ್ಯಂತ ರಸ್ತೆ ನಿರ್ಮಾಣ ಸಂಬಂಧ “ರೋಡ್ ಮ್ಯಾಪ್” ಮಾಡುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸಲಹೆ ನೀಡಿದರು.
ವಿಧನಾಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಲೋಕೋಯೋಗಿ ಇಲಾಖೆ ಅಧಿಕಾರಿಗಳ ಜತೆ ಸಮ್ಮೇಳನ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಡಿಸಿಎಂ ಪರಮೇಶ್ವರ್ , 2013 ರಿಂದ 2019 ಅವಧಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿಯೇ ಸುಮಾರು 50 ಸಾವಿರ ಕೋಟಿ ಹಣ ವೆಚ್ಚ ಮಾಡಲಾಗಿದೆ. ರಸ್ತೆ ನಿರ್ವಹಣೆ ಹೊರತು ಪಡಿಸಿ,ಇಷ್ಟು ಹಣ ವೆಚ್ಚ ಮಾಡಿದ್ದರೂ ಇನ್ನೂ ರಸ್ತೆ ನಿರ್ಮಾಣದ ಕೆಲಸವೇ ಪೂರ್ಣಗೊಂಡಿಲ್ಲ. ಇದಕ್ಕೆ ಹಣ ಹೆಚ್ಚು ಪೋಲಾಗುತ್ತಿದೆ. ಹೀಗಾಗಿ ಮುಂದಿನ ಐದು ವರ್ಷಕ್ಕೆ ರೋಡ್ ಮ್ಯಾಪ್ ಮಾಡಿಕೊಂಡು ಇಂತಿಷ್ಟು ಹಣ ನಿಗದಿ ಮಾಡುವುದು ಉತ್ತಮ ಎಂದು ಸಲಹೆ ನೀಡಿದರು.
ಇಲಾಖೆಯಲ್ಲಿ ಯಾವುದೇ ಯೋಜನೆ ಗುತ್ತಿಗೆ ನೀಡುವ ಮೊದಲು ಯೋಜನೆ ಅಂದಾಜು ವೆಚ್ಚ ಎಸ್ಟಿಮೆಟ್ ಮಾಡಲಾಗುತ್ತದೆ. ಆದರೆ, ಎಸ್ಟಿಮೆಟ್ ಮಾಡಿದ ಮೊತ್ತಕ್ಕಿಂತಲೂ ಶೇ.40 ಕ್ಕೂ ಹೆಚ್ಚಾಗಿ ಅವೈಜ್ಞಾನಿಕವಾಗಿ ಗುತ್ತಿಗೆದಾರರು ಹಣ ವೆಚ್ಚ ಮಾಡಲಾಗುತ್ತಿದ್ದಾರೆ. ಮತ್ತೊಂದೆಡೆ ಎಸ್ಟಿಮೆಟ್ ಮಾಡಿದ ಮೊತ್ತಕ್ಕಿಂತಲೂ ಕಡಿಮೆ ವೆಚ್ಚಕ್ಕೆ ಯೋಜನೆಯನ್ನು ಗುತ್ತಿಗೆದಾರರು ಪೂರ್ಣಗೊಳಿಸುತ್ತಿದ್ದಾರೆ. ಇದರಿಂದ ಗುಣಮಟ್ಟದ ಮೇಲೆ ಅನುಮಾನ ಮೂಡುವಂತೆ ಮಾಡುತ್ತಿದೆ. ಹೆಚ್ಚು ಹಾಗೂ ಕಡಿಮೆ ಮೊತ್ತಕ್ಕೆ ಯೋಜನೆ ಪೂರ್ಣಗೊಳ್ಳುವುದಾದರೆ ಇಲಾಖೆಯಿಂದ ಎಸ್ಟಿಮೆಟ್ ಮಾಡುವ ಅನಿವಾರ್ಯತೆ ಯಾಕೆ? ಮುಂದಿನ ದಿನದಲ್ಲಿ ಎಸ್ಟಿಮೆಟ್ ಆದ ಮೊತ್ತಕ್ಕೆ ಯೋಜನೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುತ್ತಿಗೆದಾರರು ಯೋಜನೆಯನ್ನು ಇಂತಿಷ್ಟು ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂಬ ನಿಯಮವಾಗಿರುತ್ತದೆ. ಆದರೂ ಅವಧಿಯೊಳಗೆ ಯಾರೂ ಕಾಮಗಾರಿ ಪೂರ್ಣಗೊಳಿಸುತ್ತಿಲ್ಲ. ಜೊತೆಗೆ ಆ ಯೋಜನೆಯ ಮೊತ್ತ ಕೂಡ ಹೆಚ್ಚು ಮಾಡಲಾಗುತ್ತಿದೆ. ಇದರಿಂದ ಅನಗತ್ಯವಾಗಿ ಹಣ ಪೋಲಾಗುತ್ತಿದೆ. ಈ ಬಗ್ಗೆಯೂ ಅಧಿಕಾರಿಗಳು ಗುತ್ತಿಗೆದಾರರಿಗೆ ಕಟ್ಟುನಿಟ್ಟಾಗಿ ಅವಧಿಯೊಳಗೆ ಪೂರ್ಣಗೊಳಿಸಲು ಸೂಚಿಸಿ ಎಂದರು.
Key words: Prepare ‘road map’ with road construction- DCM D.G. Parameshwar Instructed to Officer
#roadmap’ #construction #DCMParameshwar #Officer