ಶಿಮ್ಲಾ,ಅಕ್ಟೋಬರ್,3,2020(www.justkannada.in): ವಿಶ್ವದ ಅತಿ ದೊಡ್ಡ ಹೆದ್ಧಾರಿ ಸುರಂಗವಾದ ಅಟಲ್ ಸುರಂಗವನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲೋಕಾರ್ಪಣೆಗೊಳಿಸಿದರು.
ಮನಾಲಿ-ಲೇಹ್ ನಡುವೆ ಸಂಪರ್ಕ ಕಲ್ಪಿಸುವ 9 ಕಿಲೋಮೀಟರ್ ಉದ್ಧದ ಅಟಲ್ ಸುರಂಗ ಮಾರ್ಗವನ್ನು ಟೇಪ್ ಕತ್ತರಿಸುವ ಮೂಲಕ ಪ್ರಧಾನಿ ಮೋದಿ ಉದ್ಘಾಟಿಸಿದರು. ಈ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾಣೆ ಉಪಸ್ಥಿತರಿದ್ದರು.
ಹಿಮಾಚಲ ಪ್ರದೇಶದ ರೋಹ್ಟಾಂಗ್ನಲ್ಲಿ ನಿರ್ಮಿಸಲಾಗಿರುವ ಸುರಂಗ ಮಾರ್ಗವೂ ಲೇಹ್ ಮತ್ತು ಮನಾಲಿ ನಡುವೆ ಸುಮಾರು 46 ಕಿ.ಮೀ ಅಂತರವನ್ನು ತಗ್ಗಿಸಲಿದೆ.
ಭಾರೀ ಹಿಮಪಾತವಾದಾಗ ಪ್ರತಿವರ್ಷ ಆರು ತಿಂಗಳ ಕಾಲ ಕಣಿವೆಯನ್ನು ನಿರ್ಬಂಧಿಸಲಾಗುತ್ತಿತ್ತು. ಇದೀಗ ಅಟಲ್ ಸುರಂಗ ಮೂಲಕ ವರ್ಷ 365 ದಿನವೂ ಅಲ್ಲಿ ಪ್ರಯಾಣಿಸಬಹುದಾಗಿದೆ. ಅಟಲ್ ಸುರಂಗವನ್ನು ನಿರ್ಮಿಸುವ ತೀರ್ಮಾನವನ್ನು 2000, ಜೂನ್ 3ರಂದು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ತೆಗೆದುಕೊಂಡಿದ್ದರು. 2002, ಮೇ 26ರಂದು ಸುರಂಗ ಮಾರ್ಗಕ್ಕೆ ಶಂಕುಸ್ಥಾಪನೆ ನೇರವೇರಿಸಲಾಗಿತ್ತು.
Key words: PM Modi- innugrate- Atal Tunnel-himachal pradesh