ಮೈಸೂರು,ಅಕ್ಟೊಬರ್,09,2020(www.justkannada.in) : ಜಿಲ್ಲೆಯಲ್ಲಿ ಕೊರೊನಾ ಸೊಂಕು ಹೆಚ್ಚಳ ಹಿನ್ನೆಲೆ ಕೋವಿಡ್ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಶೇ.50ರಷ್ಟು ಬೆಡ್ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕೃತ ಆದೇಶ ಹೊರಡಿಸಿದ್ದಾರೆ.ಸರ್ಕಾರದ ಆದೇಶ ಪಾಲಿಸುವಲ್ಲಿ ನಿರ್ಲಕ್ಷ್ಯ ವಹಿಸಿದರೆ, ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ಡಿಸಿ ಎಚ್ಚರಿಕೆ ನೀಡಿದ್ದಾರೆ.ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಜೊತೆ ಇತರ ಸೌಲಭ್ಯಗಳನ್ನು ಒದಗಿಸಬೇಕು. ಜಿಲ್ಲೆಯಲ್ಲಿ ದಿನೇದಿನೇ ಸೋಂಕಿನ ಪ್ರಕರಣ ಹಾಗೂ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಬೆಡ್ ಗಳನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ.
key words : 50 percent-bed-compulsory-private-hospital-corona-treatment-DC-Rohini Sindhuri