ಪ.ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ…

ಮೈಸೂರು,ಅಕ್ಟೋಬರ್,21,2020(www.justkannada.in) : ಪ.ಪಂಗಡಕ್ಕೆ ಶೇ 7.5 ಮೀಸಲಾತಿ ನೀಡುವಂತೆ ರಾಜ್ಯಸರಕಾರವನ್ನು ಆಗ್ರಹಿಸಿ ನಾಯಕರ ಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

jk-logo-justkannada-logo

ಬುಧವಾರ ನಗರದ ಹುಣಸೂರು ರಸ್ತೆಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ರಸ್ತೆಯ ನಾಮಫಲಕದ ಎದುರು ಜಮಾವಣೆಗೊಂಡ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.

ನಾಯಕರ ಪಡೆ ಅಧ್ಯಕ್ಷ ಪಡುವಾರಹಳ್ಳಿ ಎಂ ರಾಮಕೃಷ್ಣ ಮಾತನಾಡಿ, ಪ.ಪಂಗಡಕ್ಕೆ ಶೇ 7.5 ಮೀಸಲಾತಿ ನೀಡುವಂತೆ ಒತ್ತಾಯಿಸಿ ಶ್ರೀ ಪ್ರಸನ್ನನಂದಾ ಮಹಾಸ್ವಾಮಿಗಳು ಆಹೋರಾತ್ರಿ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಹೋರಾಟವನ್ನು ಮಾಡುತ್ತಿದ್ದು ಅದನ್ನು ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದರು.

scheduled tribe-7.5%-reservation-protesting

ಪರಿಶಿಷ್ಟ ಪಂಗಡ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕವಾಗಿ ಹಿಂದುಳಿದಿದೆ

ಪರಿಶಿಷ್ಟ ಪಂಗಡದವರು ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕವಾಗಿ ಬಹು ಹಿಂದುಳಿದಿದೆ. ಅವರ ಸರ್ವತೋಮುಖ ಬೆಳವಣಿಗೆಗೆ ಹಾಗೂ ಸಂವಿಧಾನದ ಮೂಲ ಉದ್ದೇಶದಂತೆ ಸರ್ವರಿಗೂ ಸಮಪಾಲು ಸಮಬಾಳು ಎಂಬ ಆಶಯದಿಂದ ಮೀಸಲಾತಿ ಹೆಚ್ಚಳಮಾಡುವ ಮೂಲಕ ಅಭಿವೃದ್ಧಿಗೆ ಆಳುವ ವರ್ಗಗಳು ಮುಂದಾಗಬೇಕು ಎಂದು ಆಗ್ರಹಿಸಿದರು.

ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ರಾಜ್ಯ ಸರಕಾರ ನಿರ್ಲಕ್ಷ್ಯ

ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ರಾಜ್ಯ ಸರಕಾರ ನಿರ್ಲಕ್ಷ್ಯ ತೋರಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣವೇ ST ಸಮುದಾಯಕ್ಕೆ 7.5 ಮೀಸಲಾತಿ ನೀಡುವುದಾಗಿ ಹೇಳಿದ್ದು, ಮರೆತಿದ್ದಾರೆ. ಕೂಡಲೇ ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯ ಲೋಕೇಶ್ ಪಿಯಾ, ಕ್ಯಾತನಹಳ್ಳಿ ಸಿ.ನಾಗರಾಜ್, ವಿನೋದ್ ನಾಗವಾಲ, ತಿಮ್ಮನಾಯಕ, ಗೋಪಿ, ರವಿನಾಯಕ ಇನ್ನೀತರರು ಭಾಗವಹಿಸಿದ್ದರು.

key words : scheduled tribe-7.5%-reservation-protesting