ಬೆಳಗಾವಿ,ಜೂ,15,2019(www.justkannada.in): ನನಗೆ ಸಚಿವ ಸ್ಥಾನ ಬೇಡ ಎಂದಿದ್ದೆ. ಹೀಗಾಗಿ ನನಗೆ ಮಂತ್ರಿಗಿರಿ ನೀಡಿಲ್ಲ ಎಂದು ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮುಟಳ್ಳಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು ಮಾತನಾಡಿದ ಶಾಸಕ ಮಹೇಶ್ ಕುಮುಟಳ್ಳಿ, ನನ್ನ ಬದಲು ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಸಮ್ಮಿಶ್ರ ಸರ್ಕಾರಕ್ಕೆ ಸೂಚಿಸಿದ್ದೆ. ಹಾಗೆಯೇ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಹೇಳಿದೆ. ಹೇಗಾದ್ರೂ ಮಾಡಿ ಮಂತ್ರಿಗಿರಿ ಕೊಡುವಂತೆ ಸೂಚಿಸಿದೆ. ಎಂದರು.
ಇನ್ನು ಕಾಂಗ್ರೆಸ್ ವಿರುದ್ದ ಅಸಮಾಧಾನ ವ್ಯಕ್ತಪಡಿಸಿ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದ ಹಿನ್ನೆಲೆ ರಮೇಶ್ ಜಾರಕಿಹೊಳಿ ಮೇಲೆ ಪಕ್ಷದಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹೇಶ್ ಕುಮುಟಳ್ಳಿ ತಿಳಿಸಿದರು.
ನಿನ್ನೆ ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು ಇಬ್ಬರು ಪಕ್ಷೇತರ ಶಾಸಕರಾದ ಆರ್,ಶಂಕರ್ ಮತ್ತು ನಾಗೇಶ್ ರನ್ನ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಇನ್ನು ಕಾಂಗ್ರೆಸ್ ಕೋಟಾದ ಒಂದು ಸಚಿವ ಸ್ಥಾನ ಖಾಲಿ ಇದ್ದು, ಅದನ್ನ ಭರ್ತಿ ಮಾಡಿದರೇ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ,
Key words: minister-position- MLA -Mahesh Kumutalli.