ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಸಿಎಂ ಬಿಎಸ್ ವೈ ಚಾಲನೆ…

ಮೈಸೂರು,ಅಕ್ಟೋಬರ್,26,2020(www.justkannada.in):  ಕ್ಯಾಪ್ಟನ್ ಅಭಿಮನ್ಯು ಹೊತ್ತ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿ ಕಂಗೊಳಿಸುತ್ತಿರುವ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಶುಭಕುಂಭ ಲಗ್ನದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.mysore dasara-CM BS Yeddyurappa- Jamboo savari - parade.

ಈ ಬಾರಿ ಮೈಸೂರು ದಸರಾ ಜಂಬೂ ಸವಾರಿ ಅರಮನೆ ಆವರಣಕ್ಕೆ ಸೀಮಿತವಾಗಿದೆ. ಜತೆಗೆ ಈ ಬಾರಿ ಅರ್ಜುನನ ಬದಲು ಅಭಿಮನ್ಯು ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಿದ್ದಾನೆ. ಇನ್ನ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.  ಈ ವೇಳೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಮೇಯರ್ ತಸ್ನೀಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪುಷ್ಪಾರ್ಚನೆ ಮಾಡಿದರು.

3.21ಕ್ಕೆ ಜಂಬೂ ಸವಾರಿ ಮೆರವಣಿಗೆ ಆರಂಭವಾಗಿ 3.54ರ ಶುಭ ಕುಂಭ ಲಗ್ನದಲ್ಲಿ ಸಿಎಂ ಬಿಎಸ್‌ವೈ ಪುಷ್ಪಾರ್ಚನೆ ಮಾಡುವ  ಮೂಲಕ ಚಾಲನೆ ನೀಡಿದರು.

 

key words: mysore dasara-CM BS Yeddyurappa- Jamboo savari – parade.