ತುಮಕೂರು,ಅಕ್ಟೋಬರ್,27,2020(www.justkannada.in): ಶಿರಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು ಈ ನಡುವೆ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ಬಿಜೆಪಿ ನಾಯಕರು ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಿಯೋಗ ದೂರು ನೀಡಿದೆ. ದೂರು ನೀಡಿದ ಬಳಿಕ ಮಾತನಾಡಿದ ಕಾಂಗ್ರೆಸ್ ಮುಖಂಡ ವಿ.ಎಸ್ ಉಗ್ರಪ್ಪ, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡರಿಂದ ಅಕ್ರಮ ನಡೆದಿದೆ. 100 ರೂ ನಂತೆ 2 ಕೋಟಿವರೆಗೆ ಮತದಾರರಿಗೆ ಹಣ ಹಂಚಿಕೆ ಮಾಡಿದ್ದಾರೆ. ಕೂಡಲೇ ಬಿಜೆಪಿ ಅಭ್ಯರ್ಥಿಯನ್ನ ಅನರ್ಹಗೊಳಿಸಿ ಎಂದು ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ಶಿರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಹಣ ಹಂಚಿಕೆ ಮಾಡುತ್ತಿದ್ದಾರೆ. ಹಣ ಹಂಚಿಕೆ ಮಾಡಿರುವುದನ್ನ ಮತದಾರರು ವಿಡಿಯೋ ಮಾಡಿದ್ದಾರೆ. ಆ ವಿಡಿಯೋವನ್ನ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದೇವೆ. ಹಣ ಹಂಚಿಕೆಯಷ್ಟೇ ಅಲ್ಲ. ಬಿಜೆಪಿ ಗೆದ್ದರೇ ಮಾತ್ರ ಅಭಿವೃದ್ಧಿ ಮಾಡ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇವೆ ಎಂದರು.
Key words: Shira constituency- BJP-money-Congress- complains – Election Commission.