ಬೆಂಗಳೂರು,ಅಕ್ಟೋಬರ್,29,2020(www.justkannada.in) : ಗುಜರಾತಿನ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೇಶುಭಾಯ್ ಪಟೇಲ್ (92) ಗುರುವಾರ ಕೊನೆಯುಸಿರೆಳೆದಿದ್ದಾರೆ.
ಎರಡು ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಸೇವೆ
ಗುಜರಾತ್ ನಲ್ಲಿ ಎರಡು ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಉಸಿರಾಡಲು ತೊಂದರೆಯಾಗುತ್ತಿದೆ ಎಂದು ಗುರುವಾರ ಬೆಳಗ್ಗೆ ಹೇಳಿಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.
ಕಳೆದ ಸೆಪ್ಟೆಂಬರ್ನಲ್ಲಿ ಕೊರೊನಾ ಪಾಸಿಟಿವ್ ತುತ್ತಾಗಿದ್ದರು
ಕೇಶುಭಾಯ್ ಪಟೇಲ್ ಅವರಿಗೆ ಕಳೆದ ಸೆಪ್ಟೆಂಬರ್ನಲ್ಲಿ ಕೊರೊನಾ ಪಾಸಿಟಿವ್ ಆಗಿತ್ತು. ಆದರೆ, ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಆದರೂ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚೇತರಿಸಿಕೊಂಡಿದ್ದ ಅವರು ಇಂದು ಬೆಳಗ್ಗೆ ಅಹಮದಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
key words : Former-Gujarat-Chief-Minister-Keshubhai Patel-passes-away