ಮೈಸೂರು,ನವೆಂಬರ್,3,2020(www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವತಿಯಿಂದ ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳಿಗೆ 60 ದಿನಗಳ ಆನ್‍ಲೈನ್ ತರಬೇತಿ ಶಿಬಿರವನ್ನು ಆಯೋಜಿಸಿದೆ.
ಈ ಕುರಿತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ 2021ರಂದು ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್‍ಲೈನ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುವವರು ದಿನಾಂಕ:13.11.2020ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕೆಎಸ್ ಒಯು ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.
Key words: mysore- KSOU- Online training camp – IAS and KAS -exams