ಬೆಂಗಳೂರು,ನವೆಂಬರ್, 04, 2020(www.justkannada.in) : ” ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ? ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವಿಟರ್ ನಲ್ಲಿ ಟೀಕಿಸಿದದ್ದಾರೆ.
ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧಿಸಿದ್ದಾರೆ. ಇದು ಪತ್ರಿಕಾ ಸ್ವಾತಂತ್ರ್ಯದ ಮೇಲೆ ನಡೆದ ದಾಳಿ ಇದಾಗಿದೆ ಎಂದು ಹಲವಾರು ಬಿಜೆಪಿ ನಾಯಕರು ಟ್ವೀಟ್ ಮೂಲಕ ಖಂಡಿಸಿದ್ದಾರೆ.
ಇದಕ್ಕೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರತಿಕ್ರಯಿಸಿ ಅರ್ನಬ್ ಗೋಸ್ವಾಮಿ ಬಂಧನ ಜೈ ಶಂಕರ್ ಅವರಿಗೆ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂಬುದಾದರೆ, ಅವರದ್ದೇ ಪಕ್ಷದ, ” ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ? ಎಂದು ಪ್ರಶ್ನಿಸಿದ್ದಾರೆ.
key words : Experiment-force -police-Two-Week-Power TV-Closed-work-preserving-freedom-press?-Dinesh Gundurao