ಮೈಸೂರು,ನವೆಂಬರ್,06,2020(www.justkannada.in) : ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಪ್ರತಿಭಟನಾನಿರತ ಜಾಯ್ ಜೆಎಸ್ ಪೇಪರ್ ರೀಸೈಕಲಿಂಗ್ ಯೂನಿಯನ್ ಹಾಗೂ ಸಿಐಟಿಯು ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಜಾಯ್ ಜೆಎಸ್ ಪೇಪರ್ ರೀಸೈಕಲಿಂಗ್ ಯೂನಿಯನ್ ಹಾಗೂ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾಗ ಪ್ರತಿಭಟನಾ ಸ್ಥಳಕ್ಕೆ ಸಂಬಂಧಿಸಿದಂತೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ.
ಜಿಲ್ಲಾಧಿಕಾರಿ ಕಚೇರಿಯಿಂದ 100 ಮೀಟರ್ ದೂರದಲ್ಲಿ ಪ್ರತಿಭಟನೆ ಮಾಡುವಂತೆ ಪೋಲಿಸರು ಪ್ರತಿಭಟನಾನಿರತರಿಗೆ ಮನವಿ ಮಾಡಿದರು. ಪ್ರತಿ ಬಾರಿ ಪ್ರತಿಭಟನಾ ಸ್ಥಳ ಬೇರೆಡೆ ಮಾಡುವಂತೆ ಆದೇಶ ಮಾಡಿರುವುದು ಸರಿಯಲ್ಲ ಎಂದು ಪ್ರತಿಭಟನಕಾರರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು.
ಪ್ರತಿಭಟನೆಯನ್ನು ಬೇರೆಡೆ ಮಾಡುವಂತೆ ಆದೇಶ ಮಾಡಿರುವುದು ಸರಿಯಲ್ಲ. ಮಾಮೂಲಿ ಸ್ಥಳದಲ್ಲೆ ಪ್ರತಿಭಟನೆಗೆ ಅವಕಾಶ ನೀಡುವಂತೆ ಪ್ರತಿಭಟನಕಾರರು ಒತ್ತಾಯಿಸಿದರು. ಬಳಿಕ ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರು ಪ್ರಯತ್ನಿಸಿದರು ಎಂದು ತಿಳಿದು ಬಂದಿದೆ.
key words : Relationship-between-police-protesters-connection-location-protest