ಮೈಸೂರು,ನವೆಂಬರ್,09,2020(www.justkannada.in) : ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಅರ್ಧದಷ್ಟು ಹುದ್ದೆಗಳು ಖಾಲಿ ಇದ್ದು, ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.
ಮೈಸೂರು ವಿವಿಯಲ್ಲಿ 2007ರ ನಂತರ ಅಂದರೆ ಸುಮಾರು 13 ವರ್ಷಗಳಿಂದ ಯಾವುದೇ ಶಾಶ್ವತ ಬೋಧಕ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ಅದಕ್ಕೆ ಬದಲಾಗಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗಿದೆ ಎಂದಿದ್ದಾರೆ.
ಕೋವಿಡ್ ಹಿನ್ನೆಲೆ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ ಹೀಗಾಗಿ ತಾತ್ಕಾಲಿಕವಾಗಿ ತಡೆ
ಕೋವಿಡ್ಗೂ ಮುನ್ನ ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶಿಸಿತ್ತು. ಅದರಲ್ಲಿ ಹೈದರಾಬಾದ್ ಕರ್ನಾಟಕದಲ್ಲಿ 54 ಹುದ್ದೆಗಳು, ಹಿಂದುಳಿದ ವರ್ಗದ 76, ಜನರಲ್ 150 ಸೇರಿ 280 ಹುದ್ದೆಗಳನ್ನು ನೇಮಕಕ್ಕೆ ಅನುಮತಿ ಕೊಟ್ಟಿತ್ತು. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ ಎಂದು ತಾತ್ಕಾಲಿಕವಾಗಿ ತಡೆದಿದ್ದೇವೆ ಎಂದು ಮಾಹಿತಿ ನೀಡಿದರು.
ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಉಪನ್ಯಾಸಕರು ಮುಖ್ಯ
ವಿವಿಯಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಉಪನ್ಯಾಸಕರು ಮುಖ್ಯ. ಸದ್ಯ 664 ಹುದ್ದೆಗಳ ಪೈಕಿ 303 ಮಾತ್ರ ಭರ್ತಿಯಾಗಿದ್ದು, ಅರ್ಧಕ್ಕಿಂತಲೂ ಹುದ್ದೆಗಳು ಖಾಲಿ ಇದ್ದು ಅವುಗಳನ್ನು ಶೀಘ್ರವೇ ನೇಮಕ ಮಾಡಿಕೊಳ್ಳಲಾಗುವುದು ಕುಲಪತಿ ಪ್ರೊ.ಹೇಮಂತ್ ಕುಮಾರ್ ತಿಳಿಸಿದ್ದಾರೆ.
key words : Vacant-Mysore Vv-half-post-Quickly-appointed-Chancellor-Prof.G.Hemant Kumar