ಬೆಂಗಳೂರು,ನವೆಂಬರ್,15,2020(www.justkannada.in) : ರಾಜ್ಯ ಸರ್ಕಾರವು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲು ನಿರ್ಧರಿಸಿದ್ದು, ಇದಕ್ಕಾಗಿ ರೂ.50 ಕೋಟಿ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಈ ಕುರಿತು ರಾಜ್ಯದ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳುಹಿಸಿದ್ದು, ರಾಜ್ಯದಲ್ಲಿ ಮರಾಠ ಜನಾಂಗ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ಮರಾಠ ಸಮುದಾಯ ಆರ್ಥಿಕ,ಶೈಕ್ಷಣಿಕ,ಸಾಮಾಜಿಕ,ಧಾರ್ಮಿಕ,ಅಭಿವೃದ್ಧಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಅವಶ್ಯಕತೆ ಇದೆ ಎಂದು ತಿಳಿಸಲಾಗಿದೆ.
ಅದರಂತೆ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಾಗುತ್ತಿದ್ದು, ಇದಕ್ಕಾಗಿ ರೂ.50 ಕೋಟಿ ಒದಗಿಸಲಾಗುವುದು ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ.
key words : Maratha-Development-Authority-50 crores-CM BSY-promise