ಬೆಂಗಳೂರು,ನವೆಂಬರ್,16,2020(www.justkannada.in) ; ವೀರಶೈವ ಲಿಂಗಾಯತರ ಸಮುದಾಯದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಮತ್ತು ಹಿಂದುಳಿದವರು ಸೇರಿರುವುದರಿಂದ ಅವರಿಗೆ ಅನುಕೂಲ ಕಲ್ಪಿಸುವಂತಾಗಲು ಪ್ರತ್ಯೇಕ ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಬೇಕೆಂದು ಉಪ ಮುಖ್ಯಮಂತ್ರಿ,ಸಾರಿಗೆ ಸಚಿವ ಲಕ್ಷ್ಮಣ ಸವದಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸುವುದರಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಈ ಸಮುದಾಯದ ಬಡವರಿಗೆ ಮತ್ತು ಹಿಂದುಳಿದವರಿಗೆ ಅನುಕೂಲ ಸಿಗುವಂತಾಗಿ ಸಾಮಾಜಿಕ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಡಿಸಿಎಂ ಸವದಿ ತಿಳಿಸಿದ್ದಾರೆ.
ಸಚಿವರಾದ ವಿ.ಸೋಮಣ್ಣ, ಬಿ.ಸಿ.ಪಾಟೀಲ್, ಸೇಡಂ ಶಾಸಕರಾದ ರಾಜಶೇಖರ್ ಪಾಟೀಲ್ ತೆಲ್ಕೂರ್ ಮುಂತಾದವರು ಈ ಸಂದರ್ಭದಲ್ಲಿ ಸವದಿಯವರ ಜೊತೆಗಿದ್ದರು.
key words ; Veerashaiva-Lingayats-establishment-development-board-DCM Savadi-appeals