ಬೆಂಗಳೂರು,ನವೆಂಬರ್,19,2020(www.justkannada.in): ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ವೃಂದದ ಹುದ್ದೆಗಳ ನೇಮಕಾತಿಯ ಪರಿಷ್ಕೃತ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.
ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್ ಸಿ ಮುಂದಾಗಿದ್ದು ಖಾಲಿ ಇರುವ ಹುದ್ದೆಗಳಿಗೆ ಪರೀಕ್ಷೆ ನಡೆಸಲು ಆಯೋಗ ತಯಾರಿ ನಡೆಸಿದೆ. ಹುದ್ದೆಗಳ ಭರ್ತಿಗೆ ನೇಮಕಾತಿ ಸಂಬಂಧ ಪರೀಕ್ಷೆಗಳ ಪರಿಷ್ಕೃತ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.
ಜನವರಿಯಲ್ಲೇ ನೇಮಕಾತಿ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿತ್ತು. ಕೊರೊನಾ ಹಿನ್ನೆಲೆಯಲ್ಲಿ ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ಕೆಪಿಎಸ್ಸಿ ಮುಂದೂಡಿತ್ತು.
ಡಿಸೆಂಬರ್ 21 ರಿಂದ ನೇಮಕಾತಿ ಪರೀಕ್ಷೆಗಳು ಆರಂಭವಾಗಲಿವೆ. 31-1-2020ರಂದು ಅಧಿಸೂಚನೆ ಹೊರಡಿಸಲಾಗಿದ್ದ ಕರ್ನಾಟಕ ರಾಜ್ಯಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ಎ ವೃಂದದ ಸಹಾಯಕ ನಿಯಂತ್ರಕ ಹುದ್ದೆಗಳಿಗೆ ಡಿಸೆಂಬರ್ 21 ರಿಂದ ಡಿಸೆಂಬರ್ 24ರವರೆಗೆ ಪರೀಕ್ಷೆ ನಡೆಯಲಿದೆ.
ಹಾಗೆಯೇ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಮುಖ್ಯಪರೀಕ್ಷೆಗೆ 13-2-2021ರಿಂದ 16-2-2021ರವರೆಗೆ ನಡೆಯಲಿದೆ.
ರಾಜ್ಯ ವಿವಿಧ ಇಲಾಖೆಗಳಲ್ಲಿನ ಮತ್ತು ಕರ್ನಾಟಕ ಭವನ, ದೆಹಲಿಯ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಸಹಾಯಕರು/ ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ 23-1-2021 ರಂದು ಕಡ್ಡಾಯ ಕನ್ನಡ ಪರೀಕ್ಷೆ ಮತ್ತು 24-1-2021 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.
ಕರ್ನಾಟಕ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಮೂಹ ‘ಎ’ ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಹುದ್ದೆಗಳಿಗೆ(ಮುಖ್ಯಪರೀಕ್ಷೆ) 27-1-2021 ರಿಂದ 30-1-2021 ರವರೆಗೆ ಪರೀಕ್ಷೆ ನಡೆಯಲಿದೆ.
ರಾಜ್ಯ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕರು/ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ 20-3-2021 ರಂದು ಕಡ್ಡಾಯ ಕನ್ನಡ ಪರೀಕ್ಷೆ ಮತ್ತು 21-3-2021 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಕೆಪಿಎಸ್ಸಿ ಉದ್ಯೋಗಕಾಂಕ್ಷಿಗಳಿಗೆ ಪರೀಕ್ಷಾ ವೇಳಾಪಟ್ಟಿ ಪ್ರಕಟಣೆ ಸಮಾಧಾನ ತಂದಿದೆ.
English summary…
Revised provisional list for various KPSC posts announced
Bengaluru, Nov. 19, 2020 (www.justkannada.in): The Karnataka Public Service Commission (KPSC) has announced the additional selection list for various posts.
KPSC had informed that recruitment process will be held in the month of January, but it had postponed it due to Corona pandemic. Exams will begin from December 21.
Key words: KPSC –announces- revised -provisional -schedule – recruitment –exam- date- various posts.