ಮಂಡ್ಯ, ನವೆಂಬರ್,20,2020(www.justkannada.in): ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಮಂಡ್ಯದ ಪತ್ರಕರ್ತ ಎನ್.ಶಂಕರ್ ಅವರ ಕುಟುಂಬಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ 5 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಪತ್ರಕರ್ತ ಎನ್. ಶಂಕರ್ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ. ಶಂಕರ್ ಅವರು ಪೌರವಾಣಿ, ಪ್ರಜಾ ವಾರ್ತೆ, ಉದಯಕಾಲ ಸೇರಿದಂತೆ ಹಲವು ಸ್ಥಳೀಯ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದರು.
ಪತ್ರಕರ್ತ ಎನ್.ಶಂಕರ್ ಅವರು ಪತ್ನಿ ರೂಪ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದು, ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಮಂಡ್ಯ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ರಾಜ್ಯ ಸಂಘಕ್ಕೆ ಮನವಿ ಮಾಡಿತ್ತು. ರಾಜ್ಯ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಈ ಬಗ್ಗೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿ ಪರಿಹಾರ ಮಂಜೂರು ಮಾಡಿದ ಸಿಎಂ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ ಕೃತಜ್ಞತೆಗಳನ್ನು ಸಲ್ಲಿಸಿದೆ.
Key words: Corona – journalist-N Shankar- family- 5 lakh -Relief -granted.